ಜ. 18 ರಂದು “ ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ “ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಉಡುಪಿ : ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರ ಚತುರ್ಥ ವಿಶ್ವಗೀತಾ ಪರ್ಯಾಯದ ಅಂಗವಾಗಿ “ ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ “ಛಾಯಾಚಿತ್ರ ಪ್ರದರ್ಶನವನ್ನು ಉಡುಪಿ ಶ್ರೀಕೃಷ್ಣ ಮಠದ ರಾಜನಗಣದಲ್ಲಿ ಜ. 18 ರಂದು ಉದ್ಘಾಟನೆಗೊಳ್ಳಲಿದೆ.


ಕೊಡವೂರಿನ ಉಡುಪ ರತ್ನ ಪ್ರತಿಷ್ಠಾನದ ಸಹಯೋಗದೊಂದಿಗೆ ಈ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ.
ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರು ತಮ್ಮ ಅಮೆರಿಕ ಪ್ರವಾಸದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಕುರಿತು ನಿರ್ಮಿಸಿದ ಛಾಯಾಚಿತ್ರಗಳನ್ನು ಇಲ್ಲಿ ಪ್ರಸ್ತುತ ಪಡಸಲಾಗುತ್ತಿದೆ. ಫಿನಿಕ್ಸ್ ವೆಂಕಟ ಕೃಷ್ಣ ದೇವಸ್ಥಾನದಲ್ಲಿ ಯತಿಗಳ ನಿತ್ಯ ಪೂಜೆಯನ್ನು ಇಲ್ಲಿ ಛಾಯಾಚಿತ್ರಗಳ ಮೂಲಕ ಸೆರೆ ಹಿಡಿಯಲಾಗಿದ್ದು ಒಟ್ಟು 36 ಚಿತ್ರಗಳ ಪ್ರದರ್ಶನ ಜರಗಲಿದೆ.


ರಿಸ್ಸೋ ಕೊಸೈ ಕಯ್. ಜಪಾನ್, ನಿಯೋಜಿತ ಅಧ್ಯಕ್ಷ ರೆ. ಕೋಶೊ ನಿವಾನೋ,
ಆಸ್ಟ್ರೇಲಿಯಾ, ವಿಕ್ಟೋರಿಯಾದ ಮಾಜಿ ಸಚಿವ, ಲ್ಯೂಕ್ ಡನೆಲನ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯಾಪಟ್ಟದ ಯತಿಗಳಾದ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಆಶೀರ್ವದಿಸಲಿದ್ದಾರೆ .
ಸಾರ್ವಜನಿಕರು ಜ. 19 ರಿಂದ ಜ. 25ರ ವರೆಗೆ ಪ್ರದರ್ಶನವನ್ನು ವೀಕ್ಷಿಸ ಬಹುದಾಗಿದೆ.

Check Also

ಉಡುಪಿ: ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಅಣ್ಣ- ತಂಗಿ ಸಾವು..!

ಕುಂದಾಪುರ: ಆಕಸ್ಮಿಕವಾಗಿ ಕೆರೆಯ ನೀರಿಗೆ ಜಾರಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮ ಪಂಚಾಯತ್ …

Leave a Reply

Your email address will not be published. Required fields are marked *

You cannot copy content of this page.