

ಬೆಂಗಳೂರು: ರಾಜ್ಯದ ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಸದ್ಯ 1.5 ಲಕ್ಷ ಕಿಲೋ ಲೀಟರ್ ಗಳಿಂದ 2 ಲಕ್ಷ ಕಿಲೋ ಲೀಟರ್ ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ರಾಜ್ಯ ಸರ್ಕಾರದಿಂದ 250 ಕೋಟಿ ರೂಗಳ ನೆರವಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಮೀನುಗಾರರಿಗೆ ನೀಡುತ್ತಿರುವ ಸೀಮೆಎಣ್ಣೆ ಸಹಾಯಧನ ಪ್ರಕ್ರಿಯೆಯನ್ನು ಸರಳೀಕರಿಸಿ ಪ್ರಸಕ್ತ ಸಾಲಿನಿಂದ ಡಿಬಿಟಿ ಮುಖಾಂತರ ನೇರವಾಗಿ ಮೀನಾಗರರ ಖಾತೆಗೆ ಜಮೆ ಮಾಡಲಾಗುವುದು ಎಂದರು.
ಮೀನುಗಾರರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿರುವ ನಮ್ಮ ಸರ್ಕಾರ ಕಳೆದ ವರ್ಷ ವಸತಿ ರಹಿತ ಮೀನುಗಾರರಿಗೆ 5 ಸಾವಿರ ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು 10 ಸಾವಿರ ವಸತಿ ರಹಿತ ಮೀನುಗಾರರಿಗೆ ವಿಸ್ತರಿಸಲಾಗುವುದು ದರು.
ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ 17 ಕೋಟಿ ರೂ ಗಳ ಅನುದಾದನದಲ್ಲಿ ಇಸ್ರೋ ಅಭಿವೃದ್ಧಿ ಪಡಿಸಿರುವ ಜಿಪಿಎಸ್ ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಇದರಿಂದ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗೆಳನ್ನು ಪತ್ತೆ ಹಚ್ಚಲು ಅನುಕಾಲವಾಗಲಿದೆ ಎಂದು ಹೇಳಿದರು.