May 30, 2025 8:43:57 AM
WhatsApp Image 2023-02-17 at 5.16.52 PM

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ನಿಧನರಾಗಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಾಲಿ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಮೃತಪಟ್ಟಿದ್ದಾರೆ.

ವಿಜಯಮ್ಮ ಅವರು ಕಳೆದ 2 ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತಿ, ಓರ್ವ ಮಗಳು, ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>