

ನವದೆಹಲಿ: ಯೂಟ್ಯೂಬ್ ಸಿಇಒ ಸುಸಾನ್ ವೊಜ್ಸಿಕಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು ಅವರ ಸ್ಥಾನಕ್ಕೆ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ.
ಯೂಟ್ಯೂಬ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಸಾನ್ ವೊಜ್ಸಿಕಿ ಅವರು ಒಂಬತ್ತು ವರ್ಷಗಳ ನಂತರ ವಿಶ್ವದ ಅತಿದೊಡ್ಡ ಆನ್‌ಲೈನ್ ವೀಡಿಯೊ ಪ್ಲಾಟ್‌ಫಾರ್ಮ್‌ನ ಚುಕ್ಕಾಣಿ ತ್ಯಜಿಸಿದ್ದಾರೆ. ಯೂಟ್ಯೂಬ್‌ನ ಮುಖ್ಯ ಉತ್ಪನ್ನ ಅಧಿಕಾರಿ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಹೊಸ ಮುಖ್ಯಸ್ಥರಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
54 ವರ್ಷದ ಸುಸಾನ್ ವೊಜ್ಸಿಕಿ ಅವರು “ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆ ಗೂಗಲ್‌ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದ ವೊಜ್ಸಿಕಿ, 2014 ರಲ್ಲಿ ಯೂಟ್ಯೂಬ್‌ನ ಸಿಇಒ ಆದರು.