March 21, 2026
WhatsApp Image 2024-05-17 at 10.19.17 AM

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಶ್ವ ಮೇ 15ರ ಮುಂಜಾನೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ. ಸದ್ಯ ಶೋಧ ನಡೆಸಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಶ್ವ ವೃತಿಯಲ್ಲಿ ಕಳ್ಳ. ಪ್ರವೃತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. ಮದ್ಯವ್ಯಸನಿ ಚಟಕ್ಕೆ ಬಲಿಯಾಗಿ ಕಳ್ಳತನ ಮಾಡಿ ಹಲವು ಸಲ ಸಿಕ್ಕಿ ಹಾಕಿಕೊಂಡಿದ್ದ. ಹಂತಕನ‌ ಪತ್ತೆಗೆ ಎರಡು ಪೊಲೀಸ್ ಟೀಮ್ ರಚನೆ ಮಾಡಿದ್ದು, ಸದ್ಯ ಇಂದು ಅರೆಸ್ಟ್ ಆಗಿದ್ದಾನೆ. ಆರೋಪಿಯ ಬಳಿ ಯಾವುದೇ ಮೊಬೈಲ್ ಇರಲಿಲ್ಲ, ಕಳೆದ ಹದಿನೈದು ದಿನಗಳಿಂದ ವಿಶ್ವ ಅಲಿಯಾಸ್ ಗಿರೀಶ್ ಮೊಬೈಲ್ ‌ಬಳಕೆ‌ ಮಾಡಿಲ್ಲ. ಹೀಗಾಗಿ ಹಂತಕನನ್ನು ಹುಡುಕುವುದು ಪೊಲೀಸರಿಗೆ ಕಷ್ಟವಾಗಿತ್ತು ಎಂದು ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾಹಿತಿ ನೀಡಿದರು.

About The Author

Leave a Reply

Your email address will not be published. Required fields are marked *

You cannot copy content of this page.