ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.
ನಟಿ ಉಷಾ ರವಿಶಂಕರ್ ಕಿರುತೆರೆ ನಟ ಶರವಣನ್ ಅವರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದರು. ಈ ಸಂಬಂಧ ನಟಿ ವಿರುದ್ಧ ಕೋರ್ಟ್ ನಲ್ಲಿ ಶರವಣನ್ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ನಟಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆ ವೇಳೆ ಕೋರ್ಟ್ ನಟಿ ಗೈರಾಗಿದ್ದರಿಂದ ಆಕೆಯ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು.
ಕೋರ್ಟ್ ಆದೇಶದಂತೆ ನಟಿಯನ್ನು ಬಂಧಿಸಿರುವ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ನಟಿ ಉಷಾ ರವಿಶಂಕರ್ ಗೆ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ನಂತರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು ಎನ್ನಲಾಗಿದೆ. ಉಷಾ ರವಿಶಂಕರ್ ಕನ್ನಡದ ಒಂದಲ್ಲ ಎರಡು, ಸಲಗ ಚಿತ್ರಗಳು ಸೇರಿದಂತೆ ಹಲವು ಸಿನಿಮಾ ಹಾಗೂ ಕೆಲ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.