ಉಡುಪಿ :ಟಿಪ್ಪರ್ ಲಾರಿಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಎಳೆದೊಯ್ದ ಚಾಲಕ- ಭಯಾನಕ ವಿಡಿಯೋ ವೈರಲ್

ಉಡುಪಿ : ಟಿಪ್ಪರ್ ಲಾರಿಯೊಂದರ ಡಂಪರ್ ಗೆ ಸ್ಯಾಂಟ್ರೋ ಕಾರು ಸಿಲುಕಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.

ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗಿದೆ. ಈ ವೇಳೆ ಹೆದರಿಕೆಯಿಂದ ಟಿಪ್ಪರ್ ಚಾಲಕ ಲಾರಿಯನ್ನು ವೇಗವಾಗಿ ಚಲಾಯಿಸಿದ್ದಾನೆ. ಆದರೆ ಟಿಪ್ಪರ್ ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿಲ್ಲ, ಈ ನಡುವೆ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದ ಸಾರ್ವಜನಿಕರು ಟಿಪ್ಪರ್ ಚಾಲಕನಿಗೆ ಬೈದು ನಿಲ್ಲಿಸಿದ ಸಾರ್ವಜನಿಕರು. ಬಳಿಕ ಟಿಪ್ಪರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Check Also

ಕುಂದಾಪುರ : ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ …

Leave a Reply

Your email address will not be published. Required fields are marked *

You cannot copy content of this page.