ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆ ರದ್ದು : ಜೈಲಿನಿಂದ ಬಿಡುಗಡೆಯಾದ ಪುನೀತ್ ಕೆರೆಹಳ್ಳಿ

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ‌ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ.

ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ‌ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಪುನೀತ್ ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರು. ನಂತರ, ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.ಬಂಧನ ಆದೇಶವನ್ನು ಪುನೀತ್ ಪ್ರಶ್ನಿಸಿದ್ದರು. ಇದರ ವಿಚಾರಣೆಗಾಗಿ ಸರ್ಕಾದ ಸಲಹಾ ಸಮಿತಿ ರಚಿಸಿತ್ತು.

ವಿಚಾರಣೆ ನಡೆಸಿದ್ದ ಸಮಿತಿ, ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟು ವರದಿ ನೀಡಿದೆ. ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿದೆ. ಪುನೀತ್ ಬಂಧನಮುಕ್ತಗೊಳಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಪುನೀತ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

Check Also

ಮಣಿಪಾಲ: ಪರೀಕ್ಷೆಯಲ್ಲಿ ಅನುತ್ತೀರ್ಣ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.ಮೃತ ಬಾಲಕನನ್ನು ಕಾಪು …

Leave a Reply

Your email address will not be published. Required fields are marked *

You cannot copy content of this page.