ನ.19: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಮಂಗಳೂರು:- ಕ್ರಿಸ್ತ ಶಕ 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದರು.ಅವರು ನ.15ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಯ ಲೋಕಾರ್ಪಣೆ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ನ.19ರ ಶನಿವಾರದಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯಾಗಲಿದೆ, ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕು, ಕನಿಷ್ಠ 25,000 ಜನರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿದ್ದು, ಸಂಬಂಧಿಸಿದ ಇಲಾಖೆಗಳು ಕೂಡಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವೇದಿಕೆ ಸಿದ್ದತೆ, ಊಟೋಪಚಾರ, ಕುಡಿಯುವ ನೀರು, ಶೌಚಾಲಯ, ಸಾರಿಗೆ, ಆಮಂತ್ರಣ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅವರು ಸೂಚಿಸಿದರು.ಕೆದಂಬಾಡಿ ರಾಮಯ್ಯ ಗೌಡರ ಅಭಿಮಾನಿ ವರ್ಗ ದೊಡ್ಡದಿದೆ, ಅವರ ಹಾಗೂ ಅಮರ ಸುಳ್ಯ ಸಮರದ ಬಗ್ಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಯಕ್ಷ ರಂಗಾಯಣದಿಂದ ರಾಜ್ಯಾದ್ಯಂತ ನಾಟಕ ಪ್ರದರ್ಶನಗಳನ್ನು ಮಾಡಲಾಗಿದೆ ಎಂದರು.

ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು.ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯಗೌಡರ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

Check Also

ಮಂಗಳೂರು: ಪಿಎಂ ಇಜಿಪಿ, ಮುದ್ರಾಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಸಂಸದ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂ ಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು …

Leave a Reply

Your email address will not be published. Required fields are marked *

You cannot copy content of this page.