ಬೆಳ್ತಂಗಡಿ: ಸಾಲದ ಸುಳಿಗೆ ಸಿಕ್ಕಿ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯ ಸಮೀಪದ ರಬ್ಬರ್ ತೋಟದಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲುವಿನಲ್ಲಿ ನಿನ್ನೆ ನಡೆದಿದೆ.
ಗಂಡಿಬಾಗಿಲು ನಿವಾಸಿ ಡೋಮಿನಿಕ್ (50) ಎಂಬವರು ಆತ್ಮಹತ್ಯೆಗೊಳಗಾದ ವ್ಯಕ್ತಿ.
ಕೃಷಿಕರಾಗಿದ್ದ ಡೋಮಿನಿಕ್ ಅವರು ಸಾಲದ ಸುಳಿಗೆ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.