ಎಚ್ಚರ..! ಸ್ವಿಗ್ಗಿ, ಝೊಮ್ಯಾಟೋ ಡೆಲಿವರಿ ಬ್ಯಾಗ್‍ಗಳಲ್ಲೂ ಗಾಂಜಾ ಸಾಗಾಟ-ಇಬ್ಬರು ಅರೆಸ್ಟ್

ಬೆಂಗಳೂರು: ಸ್ವಿಗ್ಗಿ ಮತ್ತು ಝೊಮ್ಯಾಟೋ ಡೆಲಿವರಿ ಬ್ಯಾಗ್‍ಗಳಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸ್ವಿಗ್ಗಿ ಡೆಲಿವರಿ ಬ್ಯಾಗ್‍ನಲ್ಲಿ ಗಾಂಜಾ ಸಾಗಾಟ ಮಾಡುವ ಕುರಿತು ಅನುಮಾನ ಬಂದ ಹಿನ್ನೆಲೆ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು ನಗರದ ವೈಟ್ ಫೀಲ್ಡ್ ಮತ್ತು ಯಲಹಂಕದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಡೆಲಿವರಿ ಬ್ಯಾಗ್‍ನಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುವ ವಿಚಾರ ಬಯಲಾಗಿದೆ. ಬಂಧಿತರಿಬ್ಬರೂ ಸ್ವಿಗ್ಗಿ ಡೆಲಿವರಿ ಹೆಸರಲ್ಲಿ ಗ್ರಾಹಕರಿಗೆ ಗಾಂಜಾ ಸರಬರಾಜು ಮಾಡುತ್ತಿದ್ರು.

ಬಿಹಾರದಿಂದ ಬೆಂಗಳೂರಿಗೆ ವಿವಿಧ ಬಗೆಯ ಡ್ರಗ್ಸ್ ತಂದು ಸ್ವಿಗ್ಗಿ ಡೆಲಿವರಿ ಬ್ಯಾಗ್‍ಗಳಲ್ಲಿ ತುಂಬಿಕೊಂಡು ಅಪಾರ್ಟ್ಮೆಂಟ್‌ಗಳಲ್ಲಿ ನಡೆಯುವ ಪಾರ್ಟಿಗಳು, ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು ಎಂಬ ಕುರಿತು ತನಿಖೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಬಂಧಿತರಿಂದ 10 ಲಕ್ಷ ಮೌಲ್ಯದ ಗಾಂಜಾ ಮತ್ತು ಎಮ್‍ಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ನಗರದಲ್ಲಿ ಮತ್ತಷ್ಟು ಇದೇ ರೀತಿಯ ತಂಡಗಳು ಕೆಲಸ ಮಾಡುತ್ತಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.