ಬಂಟ್ವಾಳ: ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ನೇತ್ರಾವತಿ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ.
ಇಲ್ಲಿನ ಬಿಸಿರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ ಶಾರದ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ ಗೆ ಡಿಕ್ಕಿಯಾಗಿದ್ದು ಯಾವುದೇ ಅಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಲಭ್ಯವಾಗಿಲ್ಲ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು.
ಗಜಲಕ್ಷಿ ಕ್ರೇನ್ ಮೂಲಕ ಬಸ್ ಗಳನ್ನು ಸ್ಥಳದಿಂದ ಬದಿಗೆ ಸರಿಸಿದ ಬಳಿಕ ಸಂಚಾರಕ್ಕೆ ಅನುಕೂಲ ಮಾಡಿ ಕೊಡಲಾಯಿತು. ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.