ಮಂಗಳೂರು: ಕುಕ್ಕರ್‌ ಬಾಂಬ್‌ ಶಾರೀಕ್‌ ಬೆಂಗಳೂರಿಗೆ ಶಿಫ್ಟ್

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ನನ್ನು ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್‌ ಶಾರೀಕ್‌ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದಾರೆ.

ಡಿ.17 ರ ಮುಂಜಾನೆ 6 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಇನ್ನು ಅಲ್ಲಿಂದಲೇ ಎನ್‌ಐಎ ತನಿಖೆ ಚುರುಕುಗೊಳಿಸಲಿದ್ದು, ಸ್ಪೋಟದ ಹಿಂದಿನ ಆತನ ಉದ್ದೇಶ, ಹಿಂದಿರುವ ಶಕ್ತಿಗಳನ್ನು ಹೊರಗೆಡವಲಿದೆ.

ನ.19ರ ಶನಿವಾರ ಸಂಜೆ ನಾಗುರಿ ಬಳಿ ಆಟೋ ರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಸಂಭವಿಸಿದ ಸಂದರ್ಭ ಗಂಭೀರ ಗಾಯಗೊಂಡಿದ್ದ ಶಾರೀಕ್‌ನನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಆತನ ಕಣ್ಣಿಗೂ ಹಾನಿಯಾಗಿತ್ತು. ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಇದೀಗ ಚೇತರಿಕೆ ಕಂಡಿದ್ದು ಬೆಂಗಳೂರಿಗೆ ಶಿಫ್ಟ್ ಆದ ಹಿನ್ನಲೆ ಎನ್.ಐ.ಎ ಕಚೇರಿಯಲ್ಲಿ ಶಾರೀಕ್ ನ ವಿಚಾರಣೆ ಮುಂದುವರಿಯಲಿದೆ.

Check Also

ಭಟ್ಕಳ: ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ, 4 ಮೀನುಗಾರರ ರಕ್ಷಣೆ

ಭಟ್ಕಳ: ಕರಾವಳಿ ಜಿಲ್ಲೆ ಉತ್ತರ ಕನ್ನಡ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಈ ಮಧ್ಯೆ …

Leave a Reply

Your email address will not be published. Required fields are marked *

You cannot copy content of this page.