

ಕೇರಳದಲ್ಲಿ ಕೊರೊನಾ ಹೊಸ ತಳಿ ಪತ್ತೆಯಾಗಿದ್ದು, ಕರ್ನಾಟಕದಲ್ಲೂ ಆತಂಕದ ಕಾರ್ಮೋಡ ಕವಿಯ ತೊಡಗಿದೆ. ಕೇರಳದಲ್ಲಿ ಕೇಸ್ ಹೆಚ್ಚಳದ ಬೆನ್ನಲ್ಲೇ ರಾಜ್ಯ ಆರೋಗ್ಯ ಸಚಿವರು, ತುರ್ತು ಸಭೆ ಕರೆದು. ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.
ಕೇರಳದಲ್ಲಿ ಕೋವಿಡ್ ಹೊಸ ವಂಶಾವಳಿ ಪತ್ತೆ
ಭಾರತ ಸೇರಿ ಜಗತ್ತಿನೆಲ್ಲೆಡೆ ಮತ್ತೊಮ್ಮೆ ಕೊರೊನಾ ವಕ್ಕರಿಸುವಂತಿದೆ. ದೇಶದಲ್ಲಿ ಮತ್ತೆ ಕೊರೊನಾ ಕೇಸ್‍ಗಳ ಸಂಖ್ಯೆ ಉಲ್ಬಣಗೊಂಡಿದೆ. ಅಮೆರಿಕ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೊನಾದ ಹೊಸ ಸಬ್ ವೇರಿಯಂಟ್ ಜೆಎನ್-1 ಇದೀಗ ಭಾರತದಲ್ಲೂ ಪತ್ತೆಯಾಗಿದ್ದು, ದೇಶದೆಲ್ಲೆಡೆ ಆತಂಕ ಮನೆ ಮಾಡಿದೆ.
ಕೇರಳದಲ್ಲಿ ಕೊರೊನಾರ್ಭಟಕ್ಕೆ ಕರ್ನಾಟಕದಲ್ಲೂ ಆತಂಕ
ಕೇರಳದಲ್ಲಿ ಕೋವಿಡ್ ಹೆಚ್ಚಳವಾಗಿದ್ದು, ಇದೀಗ ಕರ್ನಾಟಕಕ್ಕೂ ಕೊರೊನಾ ಭೀತಿ ಎದುರಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಅಲರ್ಟ್ ಆಗಿದ್ದು, ಆರೋಗ್ಯಮಂತ್ರಿ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಇದುವರೆಗೂ 58 ಪಾಸಿಟಿವ್ ಕೇಸ್ ಇದೆ ಈ ಪೈಕಿ 11 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ 4 ತಿಂಗಳಿನಲ್ಲಿ ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದಾರೆ ಈಗ ಕೊರೊನಾ ಹೆಚ್ಚಾಗುತ್ತದೆ ಎಂಬ ಬಗ್ಗೆ ಮಾಹಿತಿಯಿದೆ ಕೇಂದ್ರದ ಜೊತೆ ನಮ್ಮ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ ಕೊರೊನಾ ಲಕ್ಷಣ ಕಂಡು ಬಂದರೆ ಕಡ್ಡಾಯ ಪರೀಕ್ಷೆಗೆ ಸೂಚನೆ ಕೊರೊನಾ ಪರೀಕ್ಷೆಗೆ ಹೆಚ್ಚಿನ ಕಿಟ್ ಖರೀಗೆಗೆ ಸೂಚಿಸಲಾಗಿದೆ 3 ತಿಂಗಳಿಗೆ ಅಗತ್ಯವಿರುವಷ್ಟು ಟೆಸ್ಟಿಂಗ್ ಕಿಟ್ ಖರೀದಿಗೆ ಸೂಚನೆ
ಎಲ್ಲದಕ್ಕೂ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ಮುಂದಿನ 3 ತಿಂಗಳಿಗೆ ಅವಶ್ಯಕತೆ ಇರುವಷ್ಟು ಟೆಸ್ಟಿಂಗ್ ಕಿಟ್ಟನ್ನ ಕರ್ನಾಟಕ ಮೆಡಿಕಲ್ ಕಾರ್ಪೋರೆಶನ್ನಿಂದ ಖರೀದಿ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಡಿಸೆಂಬರ್ 19 ರಂದು ತಾಂತ್ರಿಕ ಸಲ ಸಮಿತ ಸಭೆಯನ್ನು ಅವರು ಕರೆಯುತ್ತಿದ್ದಾರೆ. ಸಭೆಯಲ್ಲಿ ಇನ್ನೇನು ಮಾಡಬೇಕು ಎಂಬುದು ಚರ್ಚೆ ಮಾಡುತ್ತೇವೆ. ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ತಜ್ಞರ ಸಭೆ ಬಳಿಕ ಮಾರ್ಗಸೂಚಿ ಬಿಡುಗಡೆ ಬಗ್ಗೆ ನಿರ್ಧಾರ
ಆಸ್ಪತ್ರೆಗಳಲ್ಲಿ ನ್ಯೂನ್ಯತೆ ಕಂಡು ಬಂದರೆ ಸರಿಪಡಿಸುವಂತೆ ಸೂಚಿಸಿದ್ದಾರೆ. ಇನ್ನು ಮಂಗಳವಾರ ಡಾ.ರವಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ, ತಜ್ಞರಿಂದ ಸಲಹೆಗಳನ್ನು ಪಡೆಯುತ್ತೇವೆ. ಯಾರೂ ಭಯಪಡುವ ಅಗತ್ಯವಿಲ್ಲ. ಮಾರ್ಗಸೂಚಿ ಹೊರಡಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಕೊರೋನಾ ಹೊಸ ಕೇಸ್ಗಳು ಹೆಚ್ಚಳ
ದೇಶದಲ್ಲಿನ ಕೊರೊನಾ ಕುರಿತು ಆರೋಗ್ಯ ಸಚಿವಾಲಯದ ವರದಿಯಂತೆ ದೇಶದಲ್ಲಿ 1,492 ಹೊಸ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 339 ಕೇಸ್ ದೃಢಪಟ್ಟಿವೆ. ಕೇರಳದಲ್ಲಿ ಅತಿ ಹೆಚ್ಚು 1,104 ಪ್ರಕರಣ ದಾಖಲಾಗಿದೆ. ಇದರಿಂದ ದೇಶದ ಮೂಲೆ ಮೂಲೆಯಲ್ಲಿ ಆತಂಕತ ಕರಿಛಾಯೆ ಆವರಿಸಿದೆ. ಈಗಾಗಲೇ ಕೇಂದ್ರ ಆರೋಗ್ಯ ಇಲಾಖೆ ಎಲ್ಲ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ವಹಿಸಿಯವಂತೆ ನಿರ್ದೇಶನ ನೀಡಿದೆ. ಕೋವಿಡ್ ಮೆಟ್ಟಿ ನಿಂತ ಭಾರತಕ್ಕೆ ಹೊಸ ತಳಿಯ ರೂಪದಲ್ಲಿ ಕೊರೊನಾ ರೀ ಎಂಟ್ರಿ ಕೊಟ್ಟಿದೆ. ಇದರಿಂದ ದೇಶದಲ್ಲಿ ಮತ್ತೆ ಲಾಕ್ಡೌನ್ನಂಥ ಕಡಿಣ ನಿಯಮಗಳು ಜಾರಿ ಆಗ್ತಾವಾ ಅನ್ನೋ ಅನುಮಾನ ಕಾಡತೊಡಗಿದೆ.