

ಮಂಗಳೂರು: ಬಿಸಿಲ ಧಗೆಯಿಂದ ತತ್ತರಿಸಿ ಹೋಗಿದ್ದ ಕರಾವಳಿಗರಿಗೆ ಈಗ ಮತ್ತೊಂದು ಶುಭಸುದ್ದಿ. ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಮೊನ್ನೆ ಧಾರಾಕಾರವಾಗಿ ಸುರಿದ ಮಳೆಯ ಜೊತೆಗೆ ಗಾಳಿಯೂ ರಭಸವಾಗಿ ಬಂದಿತ್ತು. ಗಾಳಿಯ ವೇಗವು ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ದ.ಕ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಉತ್ತರ ಕರ್ನಾಟಕದ ಕೆಲವು ಕಡೆ ಉಷ್ಣ ಅಲೆ ಇರಲಿದೆ.