
ಬಂಟ್ವಾಳ: ತಾಲೂಕಿನ ಮೆಲ್ಕಾರ್ ಬಳಿ ಚಲಿಸುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ನಲ್ಲಿ ಬೆಂಕಿ ಹತ್ತಿಕೊಂಡಿದೆ. ಗುಜಿರಿ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಯ ಒಳಗಿದ್ದ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಲಾರಿಯಲ್ಲಿ ತುಂಬಿಸಿದ್ದ ಗುಜರಿ ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ
