March 21, 2026
WhatsApp Image 2024-05-20 at 9.57.09 AM
ಉಡುಪಿ : ಪುತ್ತೂರಿನ ಸೆಲೂನಿನಲ್ಲಿ ಕೆಲಸವನ್ನು ಮಾಡಿಕೊಂಡಿದ್ದ ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ಉಡುಪಿಯ ಪುತ್ತೂರಿನಲ್ಲಿ ನಡೆದಿದೆ.
ಉಡುಪಿಯ ಪುತ್ತೂರು ಗ್ರಾಮದ ಚರಣ್ ಯು ಹಲ್ಲೆಗೊಳಗಾದ ವ್ಯಕ್ತಿ. ಈತನ ಮೇಲಿರುವ ಹಳೇ ದ್ವೇಷದ ಕಾರಣಕ್ಕೆ ಯುವಕನ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದೆ ಎಂದು ವಿಚಾರ ಬೆಳಕಿಗೆ ಬಂದಿದೆ‌
ಚರಣ್ ಸೆಲೂನಿನಲ್ಲಿ ಕೆಲಸ ಮಾಡುತ್ತಿದ್ದಾಗ ಅಭಿ ಕಟಪಾಡಿ ಎಂಬಾತ ಕರೆಮಾಡಿ ಶಬರಿ ಎಂಬುವವನ ಬಗ್ಗೆ ಮಾತನಾಡ ಬೇಕಾಗಿದೆ ಎಂದು ಪುತ್ತೂರಿನ ಚೈನಾ ಟೌನ್ ಬಿರಿಯಾನಿ ಪಾಯಿಂಟ್ ಬಳಿ ಬರುವಂತೆ ತಿಳಿಸಿದ್ದನು. ಆದ್ದರಿಂದ ಚರಣ್ ಅವರು ಸುಜನ್ ಎಂಬಾತನೊಂದಿಗೆ ಬೈಕ್‌ನಲ್ಲಿ ಹಾಗೂ ಇತರ ಸ್ನೇಹಿತರಾದ ನಾಗರಾಜ್, ಕಾರ್ತಿಕ್, ರಂಜು ಎಂಬುವವರು ಮತ್ತೊಂದು ಸ್ಕೂಟಿಯಲ್ಲಿ ಹೊರಟು ಬಿರಿಯಾನಿ ಪಾಯಿಂಟ್ ಗಿಂತ ಸ್ವಲ್ಪ ಮುಂದೆ ಗೂಡಂಗಡಿ ಬಳಿ ಹೋಗಿದ್ದರು.
ಈ ವೇಳೆ ಚರಣ್ ರವರ ಪರಿಚಯವಿರುವ ಪ್ರವೀಣ, ಅಭಿ ಕಟಪಾಡಿ, ದೇವರಾಜ್, ಶಬರಿ ಮತ್ತು ಇತರ 2 ಇಬ್ಬರು ತಲವಾರಗಳನ್ನು ಹಿಡಿದುಕೊಂಡು ನಿಂತಿದ್ದು, ಚರಣ್ ಹಾಗೂ ಅವರ ಸ್ನೇಹಿತರನ್ನು ನೋಡಿದ ತಕ್ಷಣ ಕೊಲ್ಲುವ ಉದ್ದೇಶದಿಂದ ಬಂದು ತಲವಾರನ್ನು ಬೀಸಿದ್ದಾರೆ. ಆಗ ಚರಣ್ ಮತ್ತು ಅವರ ಸ್ನೇಹಿತರು ಬೈಕ್ ಮತ್ತು ಸ್ಕೂಟಿಯನ್ನು ಅಲ್ಲಿಯೇ ಬಿಟ್ಟು ತಪ್ಪಿಸಿಕೊಂಡು ಓಡಿ ಹೋಗಿದ್ದು, ಈ ವೇಳೆ ಆರೋಪಿಗಳು ಬಿಯರ್ ಬಾಟಲಿಗಳನ್ನು ಅವರ ಮೇಲೆ ಎಸೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆ ಬಳಿಕ ರಾತ್ರಿ ಚರಣ್ ಹಾಗೂ ಸ್ನೇಹಿತರು ತಾವು ಬಿಟ್ಟು ಹೋಗಿದ್ದ ಬೈಕ್ ಮತ್ತು ಸ್ಕೂಟಿಯನ್ನು ಕೊಂಡು ಹೋಗಲು ಹೋದಾಗ ಸುಜನ್ ರವರ ಬೈಕ್‌ನ್ನು ಹಾನಿಗೊಳಿಸಿ 25,000 ರೂಗಳಷ್ಟು ನಷ್ಟವನ್ನುಂಟು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಶಬರಿ ಎಂಬವನಿಗೆ ಚರಣ್ ಅವರು ಬೈದ ಕಾರಣ ಮುಂದಿಟ್ಟುಕೊಂಡು, ಹಳೇ ದ್ವೇಷದಿಂದ ಪ್ರವೀಣ್ ಮತ್ತು ಇತರ 5 ಜನ ಸೇರಿ ಕೊಲ್ಲುವ ಉದ್ದೇಶದಿಂದ ಚರಣ್ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ್ದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.