ಬಂಟ್ವಾಳ: ಔಷಧಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಮೃತ ಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ತೆಯಲ್ಲಿ ನಡೆದಿದೆ. ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.ಔಷಧಿಗೆಂದು ಅವರು ಇಂದು ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ.
ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಸಹಿತ ಅನೇಕ ಪ್ರಮುಖರು ಸಂತಾಪ ಸೂಚಿಸಿದ್ದಾರೆ.