ಉಡುಪಿ: ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರು, ಸಾರ್ವಜನಿಕರಿಗೆ ಸೆ. 25 ರವರೆಗೆ ಪ್ರವೇಶ ನಿಷೇಧಿಸಲಾಗಿದೆ.
ಮೆ. 16ರಿಂದ ಸೆ.15ರವರೆಗೆ ಈ ಹಿಂದೆ ಪ್ರವೇಶ ನಿಷೇಧ ವಿಧಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿ ಸೂಚನೆಯಂತೆ ಸೆ.25ರವರೆಗೆ ನಿಷೇಧ ಮುಂದುವರಿಸಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ವರ್ಷ ಹಾರ್ಬರ್ ಕ್ರಾಫ್ಟ್ ನಿಯಮದಂತೆ ಮಲ್ಪೆ ಬೀಚ್ ಪ್ರದೇಶದಲ್ಲಿ ಮಳೆಗಾಲದಲ್ಲಿ ಎಲ್ಲಾ ಸಾಹಸ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಇತ್ತೀಚೆಗೆ ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗಿರುವ ಕಾರಣ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.