ಉಡುಪಿ: ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!

ಉಡುಪಿ : ಉಡುಪಿ ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಕೆಲಸ ಮುಗಿಸಿ ಮನೆಗೆ ಮರಳಿದ್ದರು. ಬೆಳಗ್ಗೆ ಹೃದಯಾಘಾತದಿಂದ ಅಗಲಿದ್ದಾರೆ ಎಂದು ತಿಳಿಯಲಾಗಿದೆ.

Check Also

ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ

ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು …

Leave a Reply

Your email address will not be published. Required fields are marked *

You cannot copy content of this page.