ವಿಲಕ್ಷಣ ಘಟನೆಯೊಂದರಲ್ಲಿ ಪಂಚತಾರಾ ಹೋಟೆಲ್ ನಲ್ಲಿ ತಂಗಿದ್ದ ವಿದೇಶಿ ಮಹಿಳೆಯೊಬ್ಬರು ಬೆತ್ತಲೆಯಾಗಿ ರೂಮಿನಿಂದ ಹೊರ ಬಂದಿದ್ದಲ್ಲದೆ ಹೋಟೆಲ್ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಈ ಎಲ್ಲಾ ಘಟನಾವಳಿಗಳನ್ನು ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿಕೊಳ್ಳಲಾಗಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಂಥದೊಂದು ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು, ಭಾರತಕ್ಕೆ ಪ್ರವಾಸಕ್ಕಾಗಿ ಬಂದಿದ್ದ ವಿದೇಶಿ ಮಹಿಳೆ ಒಬ್ಬರು ಅಲ್ಲಿನ ಪಂಚತಾರಾ ಹೋಟೆಲ್ ನಲ್ಲಿ ತಂಗಿದ್ದರು. ಏಕಾಏಕಿ ಬೆತ್ತಲೆಯಾಗಿ ಬಂದ ಅವರು ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲ ಗಲಾಟೆ ಬಿಡಿಸಲು ಬಂದ ಮಹಿಳಾ ಸಿಬ್ಬಂದಿಯೊಬ್ಬರ ಕೂದಲು ಹಿಡಿದು ಎಳೆದಾಡಿದ್ದಾರೆ.
ಯಾವ ಕಾರಣಕ್ಕಾಗಿ ವಿದೇಶಿ ಮಹಿಳೆ ಈ ರೀತಿಯ ದುರ್ವರ್ತನೆ ತೋರಿದ್ದಾಳೆ ಎಂಬುದು ತಿಳಿದು ಬಂದಿಲ್ಲ. ಆದರೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಒಬ್ಬರು, ಕೂಡಲೇ ಆಕೆಯನ್ನು ದೇಶದಿಂದ ವಾಪಸ್ ಕಳುಹಿಸಿ. ಬ್ಲಾಕ್ ಲಿಸ್ಟ್ ಗೆ ಸೇರಿಸಿ ಎಂದಿದ್ದರೆ, ಮತ್ತೊಬ್ಬರು ಭಾರತದ ಕಾನೂನಿನ ಪ್ರಕಾರ ಆಕೆಗೆ ಶಿಕ್ಷೆ ವಿಧಿಸಬೇಕು ಎಂದು ಹೇಳಿದ್ದಾರೆ.