ಕಲಬುರಗಿ : ರಾಜ್ಯ ಸರ್ಕಾರವು ಬಿಪಿಎಲ್ ಕುಟುಂಬಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2,000 ರೂ. ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ.
ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಾತನಾಡಿದ ಸಚಿವ ಆರ್.
ಅಶೋಕ್. ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ರೂ. ನೆರವು ನೀಡಲು ರಾಜ್ಯ ಸರ್ಕಾರನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ 2000 ರೂ. ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಎಲ್ಲಾ ಲಂಬಾಣಿ ತಾಂಡಾ, ಕುರುಬರ ಹಟ್ಟಿ, ಅಲೆಮಾರಿಗಳ ಹಾಡಿಗಳಲ್ಲಿರುವ 1.02 ಲಕ್ಷ ಕುಟುಂಬಗಳಿಗೆ ಇನ್ನು ಒಂದು ತಿಂಗಳಲ್ಲಿ ಹಕ್ಕ ಪತ್ರ ವಿತರಣೆ ಮಾಡಲಾಗುವುದು. ಮೊದಲನೇ ಹಂತವಾಗಿ ಜನವರಿ 19ಕ್ಕೆ ಕಲಬುರಗಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ಸೇರಿ 5 ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಜಿಲ್ಲೆಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.