ಬಂಟ್ವಾಳ : ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ.
ಬಿ ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಪ್ಲೈ ಓವರ್ ನ ಅಡಿಭಾಗದಲ್ಲಿ ಕೆ ಎಲ್ ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು , ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ಧಿಯಾಗಿತ್ತು. ಅಲ್ಲದೆ ಇದು ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ.
ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ದಾಖಲೆಗಳಿವೆ. ಕೆ.ಎಲ್.14 ವೈ.8999 ನಂ.ಕಾರು ಕೇರಳ ಸರಕಾರದ ಆರ್.ಟಿ.ಒ.ಯಲ್ಲಿ ಬ್ಲ್ಯಾಕ್ ಲಿಸ್ಟ್ ಗೆ ಸೇರಿದೆ. ನಿಲ್ಲಿಸಲಾಗಿದ್ದ ಕಾರಿನ ಒಳ ಭಾಗದಲ್ಲಿ ಚೀಟಿ ಒಂದನ್ನು ಇಟ್ಟಿದ್ದು, ಸಮೀರ್ ಎಂಬ ಹೆಸರಿನ ಮುಂದೆ 9995333448 ಎಂದು ಬರೆಯಲಾಗಿದೆ. ಒನ್ಲಿ ವ್ಯಾಟ್ಸಪ್ ಕಾಲ್ ಎಂದು ಬರೆದಿದ್ದಾರೆ. ಸ್ಥಳೀಯ ಅಂಗಡಿ ಮಾಲಕರಿಗೆ ಈ ಕಾರಿನ ಬಗ್ಗೆ ಸಾಕಷ್ಟು ಸಂದೇಹಗಳು ಮೂಡಿದ್ದು, ಸ್ಯಾಂಟ್ರೋ ರವಿ ಇಲ್ಲಿ ಕಾರು ಇಟ್ಟು ಪರಾರಿಯಾಗಿದ್ದಾನೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ. ಪೊಲೀಸರು ಈಗಾಗಲೇ ಕಾರನ್ನು ಪರಿಶೀಲನೆ ಮಾಡಿದ್ದು ತನಿಖೆ ಆರಂಭಿಸಿದ್ದಾರೆ.