

ಮಂಗಳೂರು: ನಗರದ ಸಮೀಪ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮುಲ್ಕಿ ತಾಲೂಕಿನ ಕಿನ್ನಿಗೋಳಿಯಲ್ಲಿ ಸಂಭವಿಸಿದೆ.
ಸಾವನ್ನಪ್ಪಿದವರು ಮೂಲತಃ ಧಾರವಾಡ ಜಿಲ್ಲೆ ಸವದತ್ತಿ ಕಲ್ಲೂರು ನಿವಾಸಿಗಳಾದ ಆತ್ಮಾನಂದ (27), ನವೀನ್ ಹೂಗಾರ (26) ಎಂದು ತಿಳಿಯಲಾಗಿದೆ.
ವೇಗವಾಗಿ ಬಂದ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ