

ಬೆಂಗಳೂರು: ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಸಭೆ ಮತ್ತು ಪ್ರತಿಭಟನೆ ನಡೆಸಬಹುದೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಮಾ.18ರಂದು ಸಂಜೆ 5.30ಕ್ಕೆ ಶೇಷಾದ್ರಿಪುರಂನ ಎಐಟಿಯುಸಿ ಸಭಾಂಗಣದಲ್ಲಿ ಆಯೋಜನೆ ಮಾಡಿದ್ದ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರಂ ಪೊಲೀಸರು ನೀಡಿದ್ದ ನೋಟಿಸ್ ವಿರುದ್ಧ ಸಲ್ಲಿಸಲಾದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಸಭೆಗೆ ಅನುಮತಿ ನೀಡಿದ್ದಾರೆ.
ಸಮಾಲೋಚನಾ ಸಭೆಯ ಸಂಚಾಲಕರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯಭಾಸ್ಕರ್ ಅವರ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಅರ್ಜಿ ಸಲ್ಲಿಸಿದ್ದರು.
‘ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ಕೈಗೊಳ್ಳಬಹುದು. ಊಹೆಯ ಆಧಾರದ ಮೇಲೆ ಸಭೆ ಅಥವಾ ಪ್ರತಿಭಟನೆ ತಡೆಯುವಂತಿಲ್ಲ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಆದೇಶಿಸಿದ್ದಾರೆ.