

ಧರ್ಮಸ್ಥಳ: ಆಟೋ ರಿಕ್ಷಾದಲ್ಲಿ ಸಂಚರಿಸುತ್ತಿದ್ದಾಗ ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 18 ರಂದು ನಡೆದಿದೆ. ಬಾಲಕಿ ಆಟೋ ರಿಕ್ಷಾದಲ್ಲಿ ಸಂಚರಿಸುತ್ತಿದ್ದಾಗ ಆಕೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಆಟೋ ರಿಕ್ಷಾದಿಂದ ಹಾರಿ ಅಪ್ರಾಪ್ತೆ ಪ್ರಾಣ ಉಳಿಸಿಕೊಂಡಿದ್ದಾಳೆ. ಬಾಲಕಿ ಸದ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ದ.ಕ ಎಸ್ಪಿ ರಿಷ್ಯಂತ್ , ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.