ಉಡುಪಿ : ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಂದ ಮಹತ್ತರ ಕಾರ್ಯ ಮಾಡಿದ್ದಾರೆ. ತಾವೇ ಸ್ವತಃ ಬಾವಿಗಿಳಿದು ಬೆಕ್ಕಿನ ಮರಿಯನ್ನ ಪೇಜಾವರ ಶ್ರೀಗಳು ರಕ್ಷಿಸಿದ್ದಾರೆ. 40 ಅಡಿ ಆಳದ ಬಾವಿಗೆ ಬಿದ್ದು ಅಸಹಾಯಕ ಸ್ಥಿತಿಯಲ್ಲಿ ಬೆಕ್ಕು ಚಿರಾಟ ನಡೆಸಿತ್ತು. ಬೆಕ್ಕಿನ ಆಕ್ರಂದನ ಕೇಳಿ ಪೇಜಾವರ ಶ್ರೀಗಳು ತಾವೇ ಸ್ವತಃ 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯನ್ನು ರಕ್ಷಿಸಿ ಜನ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಉಡುಪಿಯ ಮುಚ್ಲುಕೋಡು ಸುಬ್ರಮಣ್ಯ ದೇವಾಲಯದಲ್ಲಿ ಬೆಕ್ಕಿನ ಮರಿಯನ್ನು ರಕ್ಷಣೆ ಮಾಡಿದ್ದಾರೆ. ದೇವಾಲಯಕ್ಕೆ ಬಂದ ವೇಳೆ ಬಾವಿಗೆ ಬೆಕ್ಕು ಬಿದ್ದಿರುವ ಮಾಹಿತಿಯನ್ನು ದೇವಾಲಯದ ಸಿಬ್ಬಂದಿ ನೀಡಿದ್ದಾರೆ. ಕೂಡಲೇ ಶ್ರೀಗಳು ಹಿಂದು ಮುಂದು ನೋಡದೆ ಹಗ್ಗದ ಸಹಾಯದಿಂದ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಪೇಜಾವರ ಶ್ರೀಗಳು ಮಹತ್ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
Check Also
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …