

ಉಡುಪಿ: ದೈತ್ಯ ಗಾತ್ರದ ಕಾಡುಕೋಣವೊಂದು ರಸ್ತೆಯಲ್ಲಿ ಪ್ರತ್ಯಕ್ಷ ವಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಿರ್ವ ಸಮೀಪದ ಪಿಲಾರು ಕಾಡಿನ ಬಳಿ ಇರುವ ರಸ್ತೆಯ ಪಕ್ಕದಲ್ಲಿ ಈ ಕಾಡು ಕೋಣ ಕಂಡು ಬಂದಿದೆ.
ಆಹಾರ ಅರಸಿಕೊಂಡು ನಾಡಿಗೆ ಬಂದಿರುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ವಿಜಯ್ , ಧೀರಜ್ ಮತ್ತು ಸಂಗಡಿಗರು ಕಾಡುಕೋಣವನ್ನು ಮತ್ತೆ ಕಾಡಿಗೆ ಕಳಿಸುವಲ್ಲಿ ಸಫಲರಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಡು ಕೋಣ ಮುಂತಾದ ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ.
ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚಾರ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಎಚ್ಚರಿಕೆ ವಹಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.