ಗೃಹಲಕ್ಷ್ಮಿ ಹಣ ಜಮೆಯಾಗಿಲ್ವೇ? ಹಾಗಾದ್ರೆ ಈ ಕೆಲ್ಸ ಮೊದಲು ಮಾಡಿ…

ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆ ಆರಂಭವಾಗಿದ್ದು, ಸರ್ಕಾರ ಯಜಮಾನಿಯರ ಖಾತೆಗೆ ಹಣ ಜಮಾ ಮಾಡುತ್ತಿದೆ. ಕೆಲವರ ಖಾತೆಗೆ ಹಣ ಜಮಾ ಪ್ರಕ್ರಿಯೆ ನಡೆಯುತ್ತಿದೆ.ಆದರೆ ಕೆಲವು ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಕೆಲವರು ನಮಗೆ SMS ಬಂದಿಲ್ಲ ಹೀಗಾಗಿ ನಮ್ಮ ಅರ್ಜಿ ಸಲ್ಲಿಕೆ ಯಶಸ್ವಿಯಾಗಿದೆಯೋ ಅಥವಾ ತಡೆಹಿಡಿಯಲಾಗಿದೆಯೋ ಅಥವಾ ರದ್ದಾಗಿದೆಯೋ ಎನ್ನುವ ಗೊಂದಲದಲ್ಲಿ ಇದ್ದಾರೆ. ಕೆಲವು ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಹಣ ಬರದೇ ಇರಬಹುದು. ಹಾಗಾಗಿ ಕೆಳಗೆ ಸೂಚಿಸಲಾದ ಕೆಲಸಗಳನ್ನು ಮಾಡಿದಲ್ಲಿ ನಿಮ್ಮ ಖಾತೆಗೆ ಹಣ ಜಮೆಯಾಗುತ್ತದೆ.

1) ನೀವು ಅರ್ಜಿ ಸಲ್ಲಿಸಲು ಹೋಗಿದ್ದರೂ ಕೂಡ ತಾಂತ್ರಿಕ ಅಡಚಣೆಗಳಾಗಿ ನಿಮ್ಮ ಅರ್ಜಿ ಸಲ್ಲಿಕೆ ಆಗಿಲ್ಲದೆ ಇರಬಹುದು. ಆದ್ದರಿಂದ ಮಹಿಳೆಯರು ಈ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡರೆ ಖಂಡಿತ ಹಣ ಬರುತ್ತದೆ.
ಗೊಂದಲದಲ್ಲಿರುವ ಮಹಿಳೆಯರು 8147500500 ಈ ಸಂಖ್ಯೆಗೆ ತಮ್ಮ ಪಡಿತರ ಚೀಟಿ ಸಂಖ್ಯೆಯನ್ನು ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ ಕಳುಹಿಸುವ ಮೂಲಕ ತಮ್ಮ ಅರ್ಜಿ ಸಲ್ಲಿಕೆ ಸ್ಥಿತಿ ಏನಾಗಿದೆ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

2) ಪ್ರಮುಖದ ವಿಚಾರ ಅಂದರೆ ನಿಮ್ಮ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ವಿವರದಲ್ಲಿ ಮಾಹಿತಿಗಳು ಹೊಂದಾಣಿಕೆ ಆಗಿರಬೇಕು, ಅಥವಾ ಹೆಸರುಗಳಲ್ಲಿ ಏನಾದರೂ ತಪ್ಪಾಗಿದ್ದರೆ ಬೇಗನೇ ಸರಿಪಡಿಸಿಕೊಳ್ಳಿ.

3) ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಎನ್ನುವುದನ್ನು ದೃಢಪಡಿಸಿಕೊಳ್ಳಿ. ಆಧಾರ್ ಲಿಂಕ್ ಮಾತ್ರವಲ್ಲ ಸೀಡಿಂಗ್ ಆಗಿ NPCI ಮ್ಯಾಪಿಂಗ್ ಕೂಡ ಆಗಿರಬೇಕು.

4) ಹಣ ವರ್ಗಾವಣೆ ಮಾಡುವಾಗ ಅವರ ಖಾತೆಗಳು ಎರರ್ ಬರುತ್ತಿವೆ ಎನ್ನಲಾಗಿದೆ. ಮಹಿಳೆಯರು ಅವರ ಖಾತೆಗಳನ್ನು ಬಳಕೆ ಮಾಡದ ಕಾರಣ ಅವುಗಳು ಕ್ಲೋಸ್ ಆಗಿದೆ. ಹಾಗಾಗಿ ಎರರ್ ಬರುತ್ತಿದೆ ಎನ್ನಲಾಗಿದೆ.
ಬ್ಯಾಂಕ್ ಖಾತೆ ರದ್ದಾಗಿರುವ ಕಾರಣದಿಂದ ಅಂತಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಆಗುತ್ತಿಲ್ಲ. ಆದ್ದರಿಂದ ಹಣ ಬಾರದ ಮಹಿಳೆಯರು ಕೂಡಲೇ ತಮ್ಮ ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಬ್ಯಾಂಕ್ ಗೆ ತೆರಳಿ ಈ ಬಗ್ಗೆ ಪರಿಶೀಲನೆ ಮಾಡಿಸಿ.

5) ಕೆಲವರಿಗೆ ತಮ್ಮ ಬ್ಯಾಂಕ್ ಖಾತೆಗಳಿಗೆ ಹಣ ಬಂದಿದ್ದರೂ SMS ಬಂದಿರುವುದಿಲ್ಲ. ಹಾಗಾಗಿ ನೀವು ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಚೆಕ್ ಮಾಡಿಸಿ,ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.