ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಮಸೂದೆಯನ್ನು ಸದನದಲ್ಲಿ ಅಂಗೀಕರಿಸುವ ಚರ್ಚೆಯನ್ನು ಸೆಪ್ಟೆಂಬರ್ 21 ರಂದು ಕೈಗೆತ್ತಿಕೊಳ್ಳಲಾಗುವುದು ಎನ್ನಲಾಗಿದೆ.
ಸೋಮವಾರದಿಂದ ಪ್ರಾರಂಭವಾಗಿರುವ ಐದು ದಿನಗಳ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಆಡಳಿತಾರೂಢ ಎನ್ಡಿಎ ಮತ್ತು ಪ್ರತಿಪಕ್ಷ ಬಿಜೆಪಿ ಬಣ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಭಾನುವಾರ ಬಲವಾದ ಧ್ವನಿ ಎತ್ತಿದ್ದವು , “ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಸರ್ಕಾರ ಹೇಳಿತ್ತು ಅದರಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಿಲ್‌ಮಸೂದೆ ಮಂಡನೆ ಮಾಡಲು ಗ್ರೀನ್‌ಸಿಗ್ನಲ್‌ನೀಡಿದೆ.