ಕಾರ್ಕಳ : ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿ ಇಂದು (ಶನಿವಾರ) ಬೆಳಿಗ್ಗೆ ನಡೆದಿದೆ.
ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಸರ್ವೆ ನಂಬರ್ 169ರ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ ಮಾಡಿ ಮಾಡಿದ್ದ ದಿ. ನೋನಯ್ಯ ಎಂಬವರ ಮನೆಯಲ್ಲಿ ಅವರ ಸಹೋದರಿಯ ಮಕ್ಕಳಾದ ಸಂಜೀವ ಮತ್ತು ಪ್ರೇಮ ಎಂಬವರು ಕಳೆದ ನಾಲ್ಕು ವರ್ಷಗಳಿಂದ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಅವರು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆ ಸಂಪೂರ್ಣ ಭಸ್ಮವಾಗಿದೆ.