BREAKING NEWS : ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿ 7 ಮಹನೀಯರ ಭಾವಚಿತ್ರ ಅನಾವರಣ

ಬೆಳಗಾವಿ : ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನ ಸಾವರ್ಕರ್ ಸೇರಿದಂತೆ 7 ಮಹನೀರ ಭಾವಚಿತ್ರಗಳನ್ನು ರಾಜ್ಯ ಸರ್ಕಾರ ಅನಾವರಣ ಮಾಡಿದೆ.

ವಿರೋಧದ ನಡುವೆಯೂ ಸುವರ್ಣಸೌಧದಲ್ಲಿ ಇಂದು ವೀರ ಸಾವರ್ಕರ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಅರ್. ಅಂಬೇಸ್ಕರ್, ಬಸವಣ್ಣ, ಮಹಾತ್ಮ ಗಾಂಧೀಜಿ, ಸರ್ದರ್ ವಲ್ಲಭಬಾಯಿ ಪಟೇಲರ ಭಾವಚಿತ್ರಗಳನ್ನು ಅನಾವರಣ ಮಾಡಲಾಗಿದೆ.

ಸ್ಪೀಕರ್ ವಿಶ್ವೇಶರ ಹೆಗಡೆ, ಸಿಎಂ ಬೊಮ್ಮಾಯಿ, ಸಚಿವ ಮಾಧುಸ್ವಾಮಿ ಅವರು ವೀರ ಸಾವರ್ಕರ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಆರ್. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧೀಜಿ, ಸರ್ದರ್ ವಲ್ಲಭಬಾಯಿ ಪಟೇಲರ ಭಾವಚಿತ್ರಗಳನ್ನು ಅನಾವರಣ ಮಾಡಿದ್ದಾರೆ.

ಸುವರ್ಣ ಸೌಧದಲ್ಲಿ ಸಾರ್ವಕರ್ ಫೋಟೋ ಅಳವಡಿಕೆಗೆ ನಮ್ಮ ವಿರೋಧವಿದೆ. ಬ್ರಿಟಿಷರ ಬಳಿ ಕ್ಷಮಾಪಣೆ ಕೇಳಿದ ವ್ಯಕ್ತಿಯ ಫೋಟೋವನ್ನು ಸುವರ್ಣಸೌಧದಲ್ಲಿ ಅಳವಡಿಕೆಗೆ ನಮ್ಮ ವಿರೋಧವಿದೆ ಎಂದು ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ.

ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ನಾಯಕರು ಮಹರ್ಷಿ ವಾಲ್ಮೀಕಿ, ಬಸವಣ್ಣ, ಶಿಶುನಾಳ ಷರೀಫ, ಜವಹಾರ್ ಲಾಲ್ ನೆಹರೂ, ಕುವೆಂಪು, ಅಂಬೇಡ್ಕರ್ ಸೇರಿದಂತೆ ಹಲವು ಮಹನೀಯರ ಫೋಟೋಗಳನ್ನು ಹಿಡಿದುಕೊಂಡು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.