ಬೆಂಗಳೂರು: ಕಾಲೇಜಿನ ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಂಗಳೂರಿನ ವಿ ವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ವಿ ವಿ ಪುರಂನಲ್ಲಿರುವಂತ ಬೆಂಗಳೂರು ಇನ್ಟಿಟ್ಯೂಟ್ ಆಫ್ ಟೆನ್ನಾಲಜಿ ಕಟ್ಟಡದ 6ನೇ ಮಹಡಿಯಿಂದ ಬಿದ್ದು, ವಿದ್ಯಾರ್ಥಿನಿ ವಾಣಿ(23) ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.
ವಿಶ್ವೇಶ್ವರಯ್ಯಯ ಕಾಲೇಜು ಆಫ್ ಲಾ ಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದಂತ ವಾಣಿ, ಬಿಐಟಿ ಇಂಜಿನಿಯರಿಂಗ್ ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ವಿವಿ ಪುರಂ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ವಾಣಿ ಬರೆದಿರುವಂತ ಡೆತ್ ನೋಟ್ ಪೊಲೀಸರಿಗೆ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.