ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಪಟ್ಟಣದ ರಾಮಪಟ್ಟಣ ಸರ್ಕಲ್‌ನ ರಸ್ತೆಯ ಫುಟ್‌ಪಾತ್ ಮೇಲೆ ಆಗತಾನೆ ಹೆರಿಗೆ ಆಗಿರುವ ನವಜಾತ ಶಿಶುವಿನ ಶವ ಪತ್ತೆಯಾಗಿದೆ.
ಪಟ್ಟಣದ ವಾರ್ಡ್ ನಂಬರ್ 9ರ ರಾಮಪಟ್ಟಣ ಸರ್ಕಲ್‌ನಲ್ಲಿ ಫುಟ್‌ಪಾತ್ ಮೇಲೆ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ ಪಟ್ಟಣದ ರಾಮಪಟ್ಟಣ ಸರ್ಕಲ್‌ನಲ್ಲಿ ಗುಡಿಬಂಡೆ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರು ಪಟ್ಟಣದಲ್ಲಿ ಕಸ ಗುಡಿಸಲು ಹೋದಾಗ ಶಿಶು ಪತ್ತೆಯಾಗಿದೆ.
ಮೊದಲು ಸಾರ್ವಜನಿಕರು ಕೋತಿ ಸತ್ತಿರಬಹುದು ಎಂದುಕೊಂಡಿದ್ದರು. ಬಳಿಕ ಪರಿಶೀಲಿಸಿದಾಗ ಅದು ನವಜಾತ ಹೆಣ್ಣು ಶಿಶುವಿನ ಶವ ಎಂಬುದು ತಿಳಿದುಬಂದಿದೆ.
ತಕ್ಷಣ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಗುಡಿಬಂಡೆ ಠಾಣೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ನವಜಾತ ಶಿಶುವನ್ನು ಪರಿಶೀಲನೆ ನಡೆಸಿದ್ದಾರೆ. ಆದರೆ ಮಗು ಸಾವನ್ನಪ್ಪಿರುವುದು ತಿಳಿದುಬಂದಿದೆ.