ಮಂಗಳೂರು ಡ್ರಗ್ಸ್ ಕೇಸ್: ಏಳು ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು

ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಶುಕ್ರವಾರ ಮಂಗಳೂರು ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿತ್ತು.‌ ಶುಕ್ರವಾರ ಮತ್ತಷ್ಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ ನಡುವೆ ಒಂದು ಖಾಸಗಿ ಕಾಲೇಜು ಆಸ್ಪತ್ರೆಯ ಮುಖ್ಯಸ್ಥರು ಪ್ರಕರಣದಲ್ಲಿ ಭಾಗಿಯಾದ ಆ ಸಂಸ್ಥೆಯ ವಿದ್ಯಾರ್ಥಿ, ವೈದ್ಯರನ್ನು ಅಮಾನತು ಮಾಡಲಾಗಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.

Check Also

ಭಾರತ ವಿರೋಧಿ, ಖಲಿಸ್ತಾನಿ ಉಗ್ರ ʻಲಖ್ಖೀರ್ ಸಿಂಗ್ ರೋಡ್ʼ ಸಾವು

ನವದೆಹಲಿ: 1985 ರಲ್ಲಿ ಏರ್ ಇಂಡಿಯಾ ಜೆಟ್ ಕನಿಷ್ಕಾ ಮೇಲೆ ಬಾಂಬ್ ದಾಳಿ ನಡೆಸಿದ ಆರೋಪಿ ಖಲಿಸ್ತಾನ್ ಪರ ಭಯೋತ್ಪಾದಕ …

Leave a Reply

Your email address will not be published. Required fields are marked *

You cannot copy content of this page.