ಜೈಲಿನಲ್ಲಿ ಅಧಿಕಾರಿಗಳು ತಪಾಸಣೆ ಮಾಡುವ ವೇಳೆ ಸಿಕ್ಕಿ ಬೀಳುವ ಭಯದಿಂದ ಜಿಲ್ಲಾ ಕಾರಾಗೃಹದ ಕೈದಿಯೊಬ್ಬ ಮೊಬೈಲ್ ನುಂಗಿದ ಘಟನೆ ಬಿಹಾರದಲ್ಲಿ ನಡೆದಿದೆ.ಖೈಶರ್ ಅಲಿ ತಪಾಸಣೆ ವೇಳೆ ಫೋನ್ ನುಂಗಿದ್ದಾನೆ. ನಂತರ ಈತನಿಗೆ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ವಿಷಯ ಬೆಳಕಿಗೆ ಬಂದಿದೆ.
ತಕ್ಷಣವೇ ಅವರನ್ನು ಗೋಪಾಲ್ಗಂಜ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು,ಕೈದಿಯ ಎಕ್ಸ್-ರೇಯಲ್ಲಿ ಹೊಟ್ಟೆಯಲ್ಲಿ ಮೊಬೈಲ್ಗಳ ಬಿಡಿ ಭಾಗಗಳು ಪತ್ತೆಯಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ಖೈದಿಯನ್ನು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಲು ಅಧೀಕ್ಷಕ ಮನೋಜ್ ಕುಮಾರ್ ತಿಳಿಸಿದ್ದಾರೆ.ಅಲಿ ಅವರನ್ನು ಜನವರಿ 17, 2020 ರಂದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ ಆಕ್ಟ್ ಅಡಿಯಲ್ಲಿ ಗೋಪಾಲ್‌ಗಂಜ್ ಪೊಲೀಸರು ಬಂಧಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದಾನೆ. ಬಿಹಾರ ಜೈಲುಗಳ ಒಳಗೆ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವುದು ಭದ್ರತಾ ಅಧಿಕಾರಿಗಳಿಗೆ ತಿಳಿದುಬಂದಿತ್ತು. ಹೀಗಾಗಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.