May 30, 2025 12:56:24 PM
4-16

ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಡಿ ಅವರು ರೋಹಿಣಿ ಸಿಂಧೂರಿ ಅವರ ಖಾಸಗಿ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡ ಮಾಡಿದ ಬೆನ್ನಲ್ಲೆ ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ಮನವಿ ಮಾಡಿದ್ದು, ನನ್ನ ಖಾಸಗಿ ಪೋಟೋ ಬಳಸಬೇಡಿ ಎಂದಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಹಂಚಿಕೊಂಡಿರುವ ‘ಖಾಸಗಿ’ ಫೋಟೋಗಳ ಬಗ್ಗೆ ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಅದರೊಂದಿಗೆ ಇದು ನನ್ನ ವೈಯಕ್ತಿಕ ಚಿತ್ರಗಳಾಗಿದ್ದು ಯಾವುದೇ ಕಾರಣಕ್ಕೂ ಇವುಗಳನ್ನು ಬಳಸದಂತೆ ಮಾಧ್ಯಮಗಳಿವೆ ಮನವಿ ಮಾಡಿದ್ದಾರೆ. ನನ್ನ ಸಾಮಾಜಿಕ ಮಾಧ್ಯಮ ಪೇಜ್‌ಗಳಿಂದ ಹಾಗೂ ವಾಟ್ಸ್‌ಅಪ್‌ ಸ್ಟೇಟಸ್‌ಗಳ ಸ್ಕ್ರೀನ್‌ ಶಾಟ್‌ಗಳ ಮೂಲಕ ರೂಪಾ ಅವರು ಫೋಟೋಗಳನ್ನು ತೆಗೆದುಕೊಂಡಿದ್ದಾರೆ.

ಈ ಚಿತ್ರಗಳನ್ನು ನನ್ನ ಚಾರಿತ್ರ್ಯ ವಧೆ ಮಾಡಲು ತೋಜೋವಧೆ ಮಾಡಲು ರೂಪಾ ಬಳಸಿಕೊಂಡಿದ್ದಾರೆ ಎಂದು ಮಾಧ್ಯಮ ಸಂಸ್ಥೆಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಯಾಗಿ ಅದರಲ್ಲೂ ಒಬ್ಬ ಮಹಿಳೆಯಾಗಿ ಇನ್ನೊಬ್ಬ ಮಹಿಳೆಯ ಖಾಸಗಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಕಾನೂನು ಉಲ್ಲಂಘನೆಯನ್ನು ಮಾಡಿದ್ದಾರೆ. ರೂಪಾ ಅವರ ವಿರುದ್ಧ ನಾನು ಶೀಘ್ರದಲ್ಲಿಯೇ ಕಾನೂನು ಕ್ರಮ ಕೈಗೊಳ್ಳಲಿದ್ದೇನೆ ಎಂದು ಅವರು ಬರೆದಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>