March 5, 2026
WhatsApp Image 2024-02-20 at 2.47.38 PM

ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ  ಪರೀಕ್ಷೆ ಹಿನ್ನೆಲೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಟಿ ಮಾಡಿ ವೇಳಾಪಟ್ಟಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ 1/03/24 ರಿಂದ 22/03/24 ರವರೆಗೆ ನಡೆಯುತ್ತೆ. SSLC 25/03/24 ರಿಂದ 6/4/ 24 ವರೆಗೆ ನಡೆಯುತ್ತೆ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ನೋಂದಣಿ ಮಾಡಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳು ಇರಲಿದೆ.

SSLC ಗೆ 2747 ಪರೀಕ್ಷಾ ಕೇಂದ್ರಗಳು ಇರಲಿದೆ ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದ್ರೂ ಒಂದು ಪರೀಕ್ಷೆಗೆ ಹಾಜರಾಗಬೇಕು ಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ.  ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು.

SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿ ಲಾಕರ್ ನಿಂದ ಪಡೆಯಬಹುದಾಗಿರುತ್ತದೆ

About The Author

Leave a Reply

Your email address will not be published. Required fields are marked *

You cannot copy content of this page.