‘ಗೃಹಲಕ್ಷ್ಮಿ’ ಯೋಜನೆ: ಇಂದಿನಿಂದ ನೋಂದಣಿ ಶುರು, ಆ.16ರಂದು ನಿಮ್ಮ ಖಾತೆಗೆ ‘2000 ಹಣ’ ಜಮಾ

ಬೆಂಗಳೂರು: ಇಂದಿನಿಂದ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಕುಟುಂಬದ ಯಜಮಾನಿ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೀಗೆ ಅರ್ಜಿ ಸಲ್ಲಿಸಿದಂತ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಆಗಸ್ಟ್ 16ರಂದು ಗೃಹ ಲಕ್ಷ್ಮಿ ಯೋಜನೆಯಡಿ 2000 ರೂ ನಿಮ್ಮ ಖಾತೆಗೆ ಜಮಾ ಆಗಲಿದೆ.

 

ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಧಾನಸೌಧದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರು. ಈ ಚಾಲನೆಯ ನಂತ್ರ ಇಂದಿನಿಂದ ಗೃಹ ಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಶುರುವಾದಂತೆ ಆಗಿದೆ. ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರು ತಮ್ಮ ಆಧಾರ್, ಬ್ಯಾಂಕ್ ಖಾತೆ ವಿವರ, ಪಡಿತರ ಚೀಟಿಗಳೊಂದಿಗೆ ಸೇವಾ ಕೇಂದ್ರಗಳಿಗೆ ತೆರಳಿ ಗೃಹ ಲಕ್ಷ್ಮಿ ಯೋಜನೆಗಾಗಿ ನೋಂದಣಿ ಮಾಡಿಸಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಯ ಉದ್ದೇಶ

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪುಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000-00ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೆ ತರಲಾಗಿದೆ.

ಯೋಜನೆಯ ವ್ಯಾಪ್ತಿ

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಮಾತ್ರ ಅನ್ವಯವಾಗುತ್ತದೆ.

ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖ ಅರ್ಹತೆಗಳು

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.
3. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅರ್ಹರಾಗುವುದಿಲ್ಲ.

ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು

1. ಪಡಿತರ ಚೀಟಿಯ ಸಂಖ್ಯೆ
2. ಯಜಮಾನಿಯ ಹಾಗೂ ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ.
3. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್ ಬುಕ್/ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ.

ನೋಂದಣಿ ವಿಧಾನ

1. ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು.

2. ಫಲಾನುಭವಿಗಳು ಮೇಲ್ಕಾಣಿಸಿದ ಕೇಂದ್ರಗಳಲ್ಲದೆ “ಪುಜಾ ಪ್ರತಿನಿಧಿ” (citizen Volunteers) ಮೂಲಕ ಸಹ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

3. ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.

4. ನಿಗಧಿತ ಸಮಯಕ್ಕೆ ಭೇಟಿ ನೀಡಿ ನೋಂದಾವಣೆ ಮಾಡಿಕೊಳ್ಳಲು ಸಾಧ್ಯವಾಗದೆಯಿದ್ದಲ್ಲಿ, ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಛೇರಿ ಸಮಯದ ನಂತರ (ಸಂಜೆ 5.00 ಗಂಟೆ ನಂತರ) ತೆರಳಿ ನೋಂದಾಯಿಸಿಕೊಳ್ಳಬಹುದು.

5. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗುವುದು.

6. ಅರ್ಜಿ ನೋಂದಾಯಿಸಿಲು ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ.

7. ಯೋಜನೆಯಡಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿ ಪಡಿಸಿರುವುದಿಲ್ಲ.

ನೋಂದಣಿ ವಿಧಾನದ ಪ್ರಕ್ರಿಯೆ (FLOW Chart)

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ 3 ಪುಕಾರ ಗಳಲ್ಲಿ ಇರುತ್ತದೆ.

ವಿಧಾನ-1 (Pre-Sanctioned RC’s): ಈಗಾಗಲೇ ಕುಟುಂಬ ತಂತ್ರಾಂಶದಿಂದ ಅರ್ಹ ಫಲಾನುಭವಿಯ ಪಡಿತರ ಚೀಟಿಯ ಸಂಖ್ಯೆಯನ್ನಾಧರಿಸಿ ಯೋಜನೆಯಡಿ ಫಲಾನುಭವಿಗಳೆಂದು ಗುರುತಿಸಲಾಗಿದೆ. ಮುಂದುವರೆದು ಯೋಜನೆಯ Online ರಿಜಿಸ್ಟ್ರೇಷನ್‌ನ ಕೆಲವು ಫೀಲ್ಡ್‌ಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದ್ದು, ಮೇಲ್ಕಾಣಿಸಿದ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸುವುದು.

ವಿಧಾನ-2 (Process for Open Portal): ಫಲಾನುಭವಿಯ ಪಡಿತರ ಚೀಟಿಯ ಸಂಖ್ಯೆಯನ್ನು upload ಮಾಡಬೇಕಾಗುತ್ತದೆ. ಇದರ ಅನುಸಾರ ಕುಟುಂಬ ತಂತ್ರಾಂಶದಿಂದ ಫಲಾನುಭವಿಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಸದರಿ ಮಾಹಿತಿಯನ್ನು ಪರಿಶೀಲಿಸಿ ದಾಖಲೆಗಳು ತಾಳೆಯಾಗಿರುವುದು ಕಂಡುಬಂದಲ್ಲಿ ಯೋಜನೆಯಡಿ ನೋಂದಣಿ ಮಾಡಲಾಗುತ್ತದೆ.

ವಿಧಾನ-3 (Process for Citizen Enrollers): ಪುಜಾಪ್ರತಿನಿಧಿಗಳು ಮನೆಮನೆಗೆ ತೆರಳಿ ಇದುವರೆಗೂ ಯೋಜನೆಯಡಿ ನೋಂದಾಯಿಸದ ಫಲಾನುಭವಿಗಳ ನೋಂದಣಿ ಮಾಡಿಕೊಳ್ಳುತ್ತಾರೆ. ಯೋಜನೆಯಡಿ ನೋಂದಾಯಿಸಲು ಅವಶ್ಯವಿರುವ ದಾಖಲೆಗಳ ಮಾಹಿತಿ ನೀಡಿ ಪ್ರಜಾ ಪ್ರತಿನಿಧಿಗಳ ಮೂಲಕ ನೋಂದಾಯಿಸಿಕೊಳ್ಳಬಹುದು.

ಫಲಾನುಭವಿಗಳಿಗೆ ಹಣಪಾವತಿ

1. ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಮಾಹೆಯಾನ ರೂ.2000/- ಗಳನ್ನು ನೇರ ವರ್ಗಾವಣೆ ಮೂಲಕ(DBT) ಜಮೆ ಮಾಡಲಾಗುವುದು.
2. ಒಂದು ವೇಳೆ ಫಲಾನುಭವಿಗಳು ಇಚ್ಛಿಸಿದಲ್ಲಿ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಬದಲು ಕುಟುಂಬದ ಯಜಮಾನಿಯ ಹೆಸರಿನಲ್ಲಿರುವ ಪರ್ಯಾಯ ಬ್ಯಾಂಕ್‌ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ ಬ್ಯಾಂಕ್ ಖಾತೆಗೆ ಮಾಹೆಯಾನ ರೂ. 2000/-ಗಳನ್ನು ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುವುದು.
3. ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಬದಲು Non Aadhar Seeded Bank Account ಗೆ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಫಲಾನುಭವಿಗಳಿಗೆ ತಕ್ಷಣವೇ ಮಂಜೂರಾತಿ ಪತ್ರ ನೀಡಲಾಗುವುದಿಲ್ಲ. ಬ್ಯಾಕ್‌ ಎಂಡ್‌ನಲ್ಲಿ ನೋಂದಾವಣೆ ಅರ್ಜಿಗಳನ್ನು ಸರ್ಕಾರದ ಆದೇಶ ಸಂಖ್ಯೆ: ಮಮಇ 70 ಮಮಅ 2023 (ಭಾಗ-4), ದಿನಾಂಕ: 12-06-2023ರಲ್ಲಿ ನಿಗಧಿಪಡಿಸಲಾದ ಸಂಬಂಧಿಸಿದ ತಾಲ್ಲೂಕಿನ/ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಲಾಗಿನ್‌ಗೆ ಕಳುಹಿಸಿ ಪರಿಶೀಲನೆ ನಡೆಸುವುದು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ಲಾಗಿನ್‌ನಲ್ಲಿ ಸ್ವೀಕೃತವಾಗಿರುವ ನೋಂದಾವಣೆ ಅರ್ಜಿಗಳನ್ನು ಒಂದೊಂದಾಗಿ ಪರಿಶೀಲಿಸಿ, ಪ್ರತಿ ನೋಂದಾವಣೆ ಅರ್ಜಿಯನ್ನು ಈಗಾಗಲೇ ಪಡಿತರ ಚೀಟಿಯನ್ವಯ ವ್ಯಕ್ತವಾಗಿರುವ ಯಜಮಾನಿಯ ಹೆಸರು ಹಾಗೂ ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆಯಾಗುವುದನ್ನು ತಾಳೆ ನೋಡುವುದು. ಹಾಗೆ ವಿವರಗಳನ್ನು ತುಲನೆ ಮಾಡಿದ ನಂತರ ಹೊಂದಾಣಿಕೆಯಾದಲ್ಲಿ ಮಾತ್ರ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆಯಲು ಶಿಫಾರಸ್ಸು ಮಾಡುವುದು. ಆನಂತರವೇ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡುವುದು.
4. ಒಂದು ವೇಳೆ Non Aadhar Seeded Bank Accountಗೆ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಫಲಾನುಭವಿಗಳ ಅತಿ ಹೆಚ್ಚು ಇದ್ದು ಹೆಚ್ಚಿನ ಸಂಖ್ಯೆಯ ನೋಂದಾವಣೆ ಅರ್ಜಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಲಾಗಿನ್‌ಗೆ ಕಳುಹಿಸಲ್ಪಟ್ಟಲ್ಲಿ, ತಾಲ್ಲೂಕು ಮಟ್ಟದ ಇತರೆ ಅಧಿಕಾರಿಗಳಿಗೂ ಅಂದರೆ, ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್‌ರವರಿಗೂ ಪ್ರತ್ಯೇಕ ಲಾಗಿನ್ ರಚಿಸಿ ಹೆಚ್ಚಿನ ನೋಂದಾವಣೆ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿಗೆ ಶಿಫಾರಸ್ಸು ಮಾಡಲು ಮಾಡಲಾಗುವುದು.

ಗೃಹಲಕ್ಷ್ಮಿ ಯೋಜನೆಯ ಸಹಾಯವಾಣಿ – 1902

ಗೃಹಲಕ್ಷ್ಮಿ ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ Toll Free ಸಹಾಯವಾಣಿ ಸಂಖ್ಯೆ:1902 ಕ್ಕೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ಕರೆ ಮಾಡಬಹುದು.

ಗ್ರಹಲಕ್ಷ್ಮಿ ಯೋಜನೆಯ ವರದಿ ತಯಾರಿಕೆ ಕುರಿತು

ಗೃಹಲಕ್ಷ್ಮಿ ಯೋಜನೆಯಡಿ ಯೋಜನೆಯ ಕುರಿತಂತೆ ಅರ್ಹ ಫಲಾನುಭವಿಗಳ ವಿವರ, ಅರ್ಜಿಗಳ ಸ್ಥಿತಿ-ಗತಿ, ಅರ್ಜಿ ತಿರಸ್ಕಾರ, ಕಾರಣಗಳು, ನೋಂದಾಯಿಸಿದ ವಿವರ, ಹಣ ಪಾವತಿ, DBT ಮೂಲಕ ಹಣ ಪಾವತಿಯಾಗದ ವಿವರಗಳು ಇತ್ಯಾದಿಗಳನ್ನೊಳಗೊಂಡ ಯೋಜನೆಯ ಸಂಪೂರ್ಣ ವರದಿಯನ್ನು ಎಂ.ಐ.ಎಸ್‌. (Management of Information System) ಮೂಲಕ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆರವರು ಪಡೆಯುವುದು. ನಿರ್ದೇಶನಾಲಯದ ಹಂತದಲ್ಲಿ ಜಿಲ್ಲೆಗಳಿಂದ ಎಂ.ಐ.ಎಸ್.ನಲ್ಲಿ ಸಲ್ಲಿಸಿದ ವರದಿಯನ್ನು ಪರಿಶೀಲಿಸಿಕೊಳ್ಳುವುದು.

ಗ್ರಹಲಕ್ಷ್ಮಿ ಯೋಜನೆಯ ಕುಂದು ಕೊರತೆ ನಿವಾರಣೆ ಕುರಿತು

ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಗಳಡಿ ಕರ್ತವ್ಯ ನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಯಾ ತಾಲ್ಲೂಕಿನಡಿ ಗೃಹಲಕ್ಷ್ಮಿ ಯೋಜನೆಯ ಕುರಿತಂತೆ ಸಾರ್ವಜನಿಕರಿಂದ ಬರುವಂತಹ ಕುಂದು ಕೊರತೆಗಳನ್ನು ಪರಿಶೀಲಿಸಿ ಪರಿಹಾರಗಳನ್ನು ಸೂಚಿಸುವುದು.

ಇಲಾಖೆಯ ಜವಾಬ್ದಾರಿಗಳು

1. ಮಾಹೆಯಾನ ಎಂ.ಐ.ಎಸ್. ವರದಿ update ಮಾಡಿಸುವುದು.
2. ಸಾರ್ವಜನಿಕರಿಂದ ಬರುವ ಕುಂದು-ಕೊರತೆಗಳ ಕುರಿತು ನಿಯಮಾನುಸಾರ ಕ್ರಮವಹಿಸುವುದು.
3. ಸೇವಾಸಿಂಧು ಪೋರ್ಟಲ್‌ಗೆ ಸಂಬಂಧಿಸಿದಂತೆ ಇ-ಆಡಳಿತ ಇಲಾಖೆಯ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದು.
4. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅಂದಾಜು ಆಯವ್ಯಯ, ಕ್ರಿಯಾ ಯೋಜನೆ, ಮಾಸಿಕ ಅನುಷ್ಠಾನ ಪ್ರಗತಿ ವಿವರ, ಅನುದಾನ ಬಿಡುಗಡೆ ಮತ್ತು ವೆಚ್ಚ ಭರಿಸುವಿಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸುವುದು.
5. ಯೋಜನೆಯ ಅನುಷ್ಠಾನ ಕುರಿತು ಪರಿಶೀಲನೆ ಮತ್ತು ವರದಿ ಸಿದ್ಧಪಡಿಸುವುದು.
6. ಸಹಾಯವಾಣಿ ಸಂಖ್ಯೆ 1902 ಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸಾರ್ವಜನಿಕರಿಂದ ಸ್ವೀಕೃತವಾದ ಪ್ರಶ್ನೆಗಳಿಗೆ ಮಾಹಿತಿ ಒದಗಿಸುವುದು.
7. ಮಾಹಿತಿ, ಶಿಕ್ಷಣ ಮತ್ತು ಸಂವಹನ ಕುರಿತ (IEC) ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

ಅಪೀಲು

ಇನ್ನೂ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ 2000 ರೂ ಹಣ ಜಮಾ ಆಗದೇ ಇದ್ದಲ್ಲಿ, ಫಲಾನುಭವಿ ಮಹಿಳೆಯರು, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆರವರು ಆಯಾ ಜಿಲ್ಲೆಯ ಗೃಹಲಕ್ಷ್ಮಿ ಯೋಜನೆ ಕುರಿತಂತೆ ಅಪೀಲು ಸಲ್ಲಿಸಬಹುದು. ಅವರು ಪರಿಶೀಲನೆ ನಡೆಸಿ, ನಿಮ್ಮ ಸಮಸ್ಯೆ ಸರಿ ಪಡಿಸಿ ಗೃಹಲಕ್ಷ್ಮಿ ಯೋಜನೆಯಡಿ 2000 ರೂ ಹಣ ನಿಮ್ಮ ಖಾತೆಗೆ ಜಮಾ ಆಗುವಂತೆ ಮಾಡಲಿದ್ದಾರೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.