ಮಂಗಳೂರು:ಧಾರಾಕಾರ ಮಳೆ ಹಿನ್ನಲೆ ಇಂದು (ಜುಲೈ 20) ಶನಿವಾರ ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಇದ್ದ ಕಾರಣ ಜಿಲ್ಲೆಯ ಐದುತಾಲೂಕಿನಲ್ಲಿ ಶುಕ್ರವಾರ ರಜೆ ಘೋಷಿಸಲಾಗಿತ್ತು.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ನದಿ ಪಾತ್ರದ ಜನರು ಆತಂಕದಲ್ಲೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ