ಬೆಂಗಳೂರು; ಭೀಕರ ರಸ್ತೆ ಅಪಘಾತದಲ್ಲಿ ಐವರು ಇಂಜಿನಿಯರ್ ಗಳ ಪೈಕಿ ಮೂವರು ಇಂಜಿನಿಯರ್ಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಆಗಸ್ಟಿನ್ ನಿರೋಷ್, ದಾ ರೆಡ್ಡಿ, ವಿಘ್ನೇಶ್ ಸ್ಥಳದಲ್ಲೆ ಸಾವನ್ನಪ್ಪಿದ್ದು, ಮಿಥುನ್ ಯಾದವ್ ಹಾಗೂ ಶತೃಘ್ನ ಸ್ಥಿತಿ ಗಂಭೀರವಾಗಿದೆ.
ಮೃತರೆಲ್ಲರು ಬೆಂಗಳೂರಿನ ಖಾಸಗಿ ಐಟಿ ಕಂಪನಿಯೊಂದರಲ್ಲಿ ಟೆಕ್ಕಿಗಳಾಗಿದ್ದರು. ರಜೆ ಇದ್ದಿದ್ದರಿಂದ ಒಂದು ದಿನದ ಪಿಕ್‌ನಿಕ್ ಗೆ ಎಂದು ಮೈಸೂರು ಟ್ರಿಪ್ ಹೋಗಿದ್ದರು. ಮೈಸೂರಿಗೆ ತೆರಳಿ ವಾಪಸ್ ಬರುತ್ತಿದ್ದಾಗ ಅಪಘಾತ ನಡೆದಿದೆ.
ಕಾರು ಚಾಲಕ ಆಗಸ್ಟೀನ್ ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಜನ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.