October 16, 2024
n44359297616689160419038fa7ff9454df8ff626f3ccd4869375d55e9a580c2d1edf576ea3f3a9810ffdfc

ಮಂಗಳೂರು: ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ-ಐಜಿಪಿ ಪ್ರವೀಣ್ ಸೂದ್ ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದ್ದು, ಇದು ಅನಿರೀಕ್ಷಿತ ಸ್ಫೋಟವಲ್ಲ ಉಗ್ರರ ಕೃತ್ಯ ಎಂದು ತಿಳಿಸಿದ್ದಾರೆ.

ಮಂಗಳೂರಿನ ನಾಗರಿ ಬಳಿ ನಿನ್ನೆ ಸಂಜೆ ಚಲಿಸುತ್ತಿದ್ದ ಆಟೋದಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟ ಪ್ರಕರಣ ಸಂಬಂಧ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಡಿಜಿಪಿ, ಇದು ಉಗ್ರರ ಕೃತ್ಯವಾಗಿದ್ದು, ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲಾನ್ ಮಾಡಲಾಗಿತ್ತು.

ಸಾವು, ನೋವು ಹಾನಿ ಉಂಟು ಮಾಡಲು ದುಷ್ಕರ್ಮಿಗಳು ಯೋಜನೆ ರೂಪಿಸಿದ್ದರು ಎಂದು ತಿಳಿಸಿದ್ದಾರೆ. ಕರ್ನಾಟಕ ಪೊಲೀಸರಿಂದ ಸೂಕ್ಷ್ಮ ಹಾಗೂ ಆಳವಾದ ತನಿಖೆ ನಡೆಯುತ್ತಿದೆ. ಕೇಂದ್ರ ತನಿಖಾ ತಂಡದಿಂದಲೂ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.