ಮಂಗಳೂರು: ಚಲಿಸುತ್ತಿದ್ದ ರಿಕ್ಷಾದಲ್ಲಿ ನಿಗೂಢವಾಗಿ ಸ್ಫೋಟ : ಇಬ್ಬರಿಗೆ ಗಾಯ

ಮಂಗಳೂರು : ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಸ್ಫೋಟವಾದ ಘಟನೆ ಇಂದು ಕಂಕನಾಡಿ ಪೊಲೀಸ್ ಠಾಣೆ ಬಳಿ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕನಿಗೆ ಹಾಗೂ ಆಟೋ ಚಾಲಕನಿಗೆ ಗಾಯಗಳಾಗಿವೆ.ಸ್ಪೋಟದ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ವಿಧಿವಿಜ್ಞಾನ ಇಲಾಖೆಯ ತಜ್ಞರು ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಪ್ರಯಾಣಿಕ ಹತ್ತಿದ ಬಳಿಕ ಆಟೋನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಟೋದಲ್ಲಿ ತೆರಳುತ್ತಿದ್ದ ಪ್ರಯಾಣಿಕನ ಬಳಿ ಬ್ಯಾಗ್ ಇತ್ತು. ಘಟನೆಯಲ್ಲಿ ಪ್ರಯಾಣಿಕನಿಗೆ ಹಾಗೂ ಆಟೋ ಚಾಲಕನಿಗೆ ಗಾಯಗಳಾಗಿವೆ. ಘಟನೆ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಆತಂಕ ಬೇಡ. ಬೆಂಕಿ ಕಾಣಿಸಿಕೊಂಡಿದೆ ಎಂದು ಅಟೋ ಚಾಲಕ ಹೇಳುತ್ತಿದ್ದಾನೆ.ಈ ಬಗ್ಗೆ ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆ. ಬ್ಲಾಸ್ಟ್ ಆದ ಬಗ್ಗೆ ಪ್ರತ್ಯಕ್ಷ ಸಾಕ್ಷಿಗಳು ಏನು ಹೇಳಿಲ್ಲ ಎಂದು ಮಾಹಿತಿ ನೀಡಿದರು.

Check Also

ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ …

Leave a Reply

Your email address will not be published. Required fields are marked *

You cannot copy content of this page.