ಮಂಗಳೂರು : ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ನಾಲ್ವರು ಅಧಿಕಾರಿಗಳಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಭೇಟಿ ನೀಡಿದೆ.
ಮಂಗಳೂರಿನ ಗರೋಡಿ ಸಮೀಪ ನಿನ್ನೆ ಸಂಜೆ ಆಟೋ ರಿಕ್ಷಾ ಸಂಭವಿಸಿದ ಸ್ಪೋಟಕ ಪ್ರಕರಣದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇನ್ನು ಮಂಗಳೂರಿನಲ್ಲಿ ನಿನ್ನೆ ಸಂಜೆ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ನಿನ್ನೆ ಸ್ಪೋಟದಲ್ಲಿ ಭಾಗಿಯಾದವನ ಮತ್ತೊಂದು ಹೆಸರು ಪತ್ತೆಯಾಗಿದ್ದು, ನಿನ್ನೆ ಸ್ಪೋಟದಲ್ಲಿ ಭಾಗಿಯಾದವನ ಹೆಸರು ಯೂನಸ್ ಖಾನ್ ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ನಾಗುರಿ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡು ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಅಪರಿಚಿತ ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಸದ್ಯ ಸ್ಪೋಟಕ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು, ಬೋಲ್ಟ್ ಪತ್ತೆ ಹಚ್ಚಿದ್ದಾರೆ.
ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತುಗಳು ಪತ್ತೆಯಾಗಿದ್ದು, ಲಘು ತೀವ್ರ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು, ವಸ್ತುಗಳನ್ನು ಪರೀಕ್ಷೆಗಾಗಿ ಎಫ್ ಎಸ್ ಎಲ್ ತಂಡಕ್ಕೆ ಕಳುಹಿಸಲಾಗಿದೆ.