ತಾಕತ್ತಿದ್ರೆ ಜಮೀರ್ ಅಹ್ಮದ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು – ವಜ್ರದೇಹಿ ಸ್ವಾಮೀಜಿ

ಮಂಗಳೂರು : ಬಜರಂಗದಳ ಕಾರ್ಯಕರ್ತರನ್ನು ಗಡಿಪಾರು ಆದೇಶದ ವಿಚಾರವಾಗಿ ಕೆಂಡಾಮಂಡಲವಾಗಿರುವ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್‌ನನ್ನು ಗಡಿಪಾರು ಮಾಡಬೇಕು. ಇಲ್ಲೆಲ್ಲೂ ಅಲ್ಲ ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು.‌ ನಿಮಗೆ ತಾಕತ್ತಿದೆಯಾ ಎಸ್ಪಿ ಸಾಹೇಬ್ರೆ ಎಂದು ಪೊಲೀಸ್ ಇಲಾಖೆಗೆ ಸವಾಲೆಸೆದಿದ್ದಾರೆ. ಏಕವಚನದಲ್ಲಿಯೇ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ಸಂಬೋಧಿಸಿರುವ ಸ್ವಾಮೀಜಿ, ಗಡಿಪಾರಾದ ಬಜರಂಗದಳದ ಕಾರ್ಯಕರ್ತರ ಪರ ಬ್ಯಾಟಿಂಗ್ ಮಾಡಿದ್ದಾರೆ. ನಿಮಗೆ ಸ್ವಲ್ಪವಾದರೂ ಕಾನೂನಿನ ಅರಿವಿದ್ದರೆ ಅನಾಮತ್ತಾಗಿ ಬಂದವ ವಕ್ಫ್ ಬೋರ್ಡ್ ಸಚಿವ ಜಮೀರ್ ನನ್ನು ಮೊದಲು ಗಡಿಪಾರು ಮಾಡಿ. ಹಿಂದೂ ಕಾರ್ಯಕರ್ತರ ಮೇಲೆ ಯಾವುದಕ್ಕೋಸ್ಕರ ಕೇಸ್ ಹಾಕೊಂಡಿದ್ದಾರೆಂದು ಅವಲೋಕನ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋವುಗಳನ್ನು ರಕ್ಷಣೆ ಮಾಡಿ 10-20 ಕೇಸ್ ಬಿದ್ದಿದೆ. ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ. ಸರ್ಕಾರಕ್ಕೆ ನಮ್ಮ ಮಕ್ಕಳನ್ನು ಕಂಡರೆ ಭಯ. ಹಿಂದೂ ಕಾರ್ಯಕರ್ತ ಲತೇಶ್ ನನ್ನು ಗಡಿಪಾರು ಮಾಡಬಹುದು. ಆದರೆ, ಲತೇಶ್ ನಂತಹ ಸಾವಿರಾರು ಯುವಕರು ಹುಟ್ಟಿದ್ರೆ ಮುಂದಿನ ದಿನಗಳು ನಿಮಗೆ ಕಷ್ಟವಾಗಬಹುದು ಎಂದು ಸುಳ್ಯದ ಕಾರ್ಯಕ್ರಮವೊಂದರಲ್ಲಿ ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.

Check Also

ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್‌ಗೆ ಜಾಮೀನು

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ …

Leave a Reply

Your email address will not be published. Required fields are marked *

You cannot copy content of this page.