ಲೋಕಸಭೆ ಚುನಾವಣೆ: ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ :5000ಕ್ಕೂ ಹೆಚ್ಚು ಪತ್ರಗಳನ್ನ ಕಳುಹಿಸಿ ಕೇಂದ್ರ ನಾಯಕರ ಬಳಿ ಮನವಿ‌‌

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಚರ್ಚೆ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಈ ಬೆಳವಣಿಗೆಯ ಮಧ್ಯೆಯೇ ʼಗೋಬ್ಯಾಕ್ ಶೋಭಾʼ ಪತ್ರ ಅಭಿಯಾನ ಶುರುವಾಗಿದೆ.

ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಮೂರನೇ ಬಾರಿ ಸ್ಪರ್ಧಿಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿರುವ ಬೆನ್ನಲ್ಲೇ ʼಗೋಬ್ಯಾಕ್ ಶೋಭಾʼ ಪತ್ರ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ಆರಂಭಿಸಿದ್ದಾರೆ. ಈ ಪತ್ರವನ್ನು ರಾಷ್ಟ್ರ ನಾಯಕರಿಗೆ ರವಾನಿಸಿದ್ದಾರೆ ಎಂದು ವರದಿಯಾಗಿದೆ.

ಶೋಭಾ ಕರಂದ್ಲಾಜೆ ಎರಡು ಬಾರಿ ಆಯ್ಕೆಯಾಗಿದ್ದರೂ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯೇನೂ ನೀಡಿಲ್ಲ. ಈ ಹಿನ್ನಲೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಬಾರದು. ಹೊಸ ಮುಖಗಳಿಗೆ ಟಿಕೆಟ್ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಯಾವ ಪಕ್ಷದವರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಎಂದು ಖಾತ್ರಿಯಾಗಿಲ್ಲ. ಸ್ವ ಪಕ್ಷದ ಕಾರ್ಯಕರ್ತರೇ ಈ ನಡುವೆ ಶೋಭಾ ಕರಂದ್ಲಾಜೆ ವಿರುದ್ದ ಹೈಕಮಾಂಡ್ ಗೆ ಪತ್ರ ರವಾನಿಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.