May 11, 2025
WhatsApp Image 2025-03-21 at 3.06.29 PM

ಮೂಡುಬಿದಿರೆ: ಸರ್ಕಾರಿ ಬಸ್ ಗೆ ಬೈಕೊಂದು ಢಿಕ್ಕಿ ಹೊಡೆದು ಸಹಸವಾರೆಯೊರ್ವಳು ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ, ಇಪ್ಪತ್ತು ವರ್ಷದ ನಿಕ್ಷಿತಾ ಸಾವನ್ನಪ್ಪಿದ ಯುವತಿ. ಈಕೆ ತನ್ನ ಗೆಳೆಯನೊಂದಿಗೆ ಬರುತ್ತಿದ್ದಾಗ ಈ ದುರಂತ ನಡೆದಿದೆ. ಬೆಳುವಾಯಿ ಮೂಲದ ಈಕೆ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಸವಾರನ ನಿರ್ಲಕ್ಷ್ಯದಿಂದ ಈ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗದೆ ಮೃತಪಟ್ಟಿದ್ದಾಳೆ. ಮೃತ ಯುವತಿಯ ಗೆಳೆಯ ಮಾರ್ನಾಡಿನ ರಂಜಿತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>