ಮುಸ್ಲಿಂ ರಾಷ್ಟ್ರವಾದ ತಜಿಕಿಸ್ತಾನದಲ್ಲಿ ಹಿಜಾಬ್ ಬ್ಯಾನ್​..!

ಭಾರತದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಬಗ್ಗೆ ಬಹಳ ಹಿಂದಿನಿಂದಲೂ ಚರ್ಚೆ ನಡೆಯುತ್ತಿದೆ. ಕೆಲವು ರಾಜ್ಯಗಳು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಿದಾಗ, ವಿಷಯವು ನ್ಯಾಯಾಲಯದ ಮೆಟ್ಟಿಲೇರಿತು. ತಜಿಕಿಸ್ತಾನದಲ್ಲಿ ಹಿಜಾಬ್ ಧರಿಸುವುದು ಅಥವಾ ಗಡ್ಡವನ್ನು ಇಟ್ಟುಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ತಜಿಕಿಸ್ತಾನ್ ಸಾಂವಿಧಾನಿಕವಾಗಿ ಜಾತ್ಯತೀತ ರಾಷ್ಟ್ರವಾಗಿದೆ, ಇದು ಮುಸ್ಲಿಂ ದೇಶವಾಗಿದ್ದು, ಇಲ್ಲಿನ ಸಂಸತ್ ಹಿಜಾಬ್ ಅನ್ನು ನಿಷೇಧಿಸುವ ಮಸೂದೆಯನ್ನು ಅನುಮೋದಿಸಿದೆ. ಶಾಲೆಗಳಲ್ಲಿ ಮಾತ್ರವಲ್ಲ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲೂ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗುತ್ತಿದೆ. ಭಾರತದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಬಗ್ಗೆ ಬಹಳ ಹಿಂದಿನಿಂದಲೂ ಚರ್ಚೆ ನಡೆಯುತ್ತಿದೆ.

ಕೆಲವು ರಾಜ್ಯಗಳು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಿದಾಗ, ವಿಷಯವು ನ್ಯಾಯಾಲಯದ ಮೆಟ್ಟಿಲೇರಿತು. ತಜಿಕಿಸ್ತಾನದಲ್ಲಿ ಹಿಜಾಬ್ ಧರಿಸುವುದು ಅಥವಾ ಗಡ್ಡವನ್ನು ಇಟ್ಟುಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ದೇಶದ ಜನಸಂಖ್ಯೆಯಲ್ಲಿ ಶೇ.95ರಷ್ಟು ಮುಸ್ಲಿಮರಿದ್ದಾರೆ, ಆದರೆ ಇಲ್ಲಿ ನಿಯಮಗಳು ಸಾಕಷ್ಟು ಕಟ್ಟುನಿಟ್ಟಾಗಿವೆ. 2015 ರಲ್ಲಿ ದಿ ಡಿಪ್ಲೋಮ್ಯಾಟ್‌ನಲ್ಲಿ ಪ್ರಕಟವಾದ ವರದಿಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರು ಹಿಜಾಬ್ ಧರಿಸುವುದನ್ನು ತಡೆಯುವ ನಿಯಮಗಳಿವೆ ಎಂದು ಹೇಳುತ್ತದೆ.

18 ವರ್ಷದೊಳಗಿನ ಮಕ್ಕಳು ಅಂತ್ಯಕ್ರಿಯೆ ಹೊರತುಪಡಿಸಿ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ಇಲ್ಲಿನ ಕಾನೂನು ಮದುವೆಯಂತಹ ಕಾರ್ಯಕ್ರಮಗಳನ್ನೂ ನಿಯಂತ್ರಿಸುತ್ತದೆ. ಇಲ್ಲಿ ಯಾರೂ ಮದುವೆ ಮಾಡಬಾರದು ಅಂತಲ್ಲ, ಸರ್ಕಾರದಿಂದ ಅನುಮತಿ ಪಡೆದ ನಂತರವೇ ಎಲ್ಲಾ ಕೆಲಸಗಳು ನಡೆಯುತ್ತವೆ.

Check Also

ನಾಳೆ (ಜು.20) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ …

Leave a Reply

Your email address will not be published. Required fields are marked *

You cannot copy content of this page.