ಸೌಜನ್ಯ ಪ್ರಕರಣ ಆಧರಿಸಿ ಸ್ಯಾಂಡಲ್ ವುಡ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನೆಮಾ

ಬೆಂಗಳೂರು : ನೈಜ ಘಟನೆ ಆಧರಿಸಿ ಅನೇಕ ಸಿನೆಮಾಗಳು ಮೂಡಿ ಬಂದಿದ್ದು, ಈ ಹಿನ್ನಲೆಯಲ್ಲಿ ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್ ವುಡ್‌ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ.

ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೇ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಈ ಘಟನೆ ನಡೆದಿದ್ದು 2012ರಲ್ಲಿ. ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ ದಿನ ರಾತ್ರಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. 2012ರ ಅಕ್ಟೋಬರ್ 10 ರಂದು ಧರ್ಮಸ್ಥಳದ ಮಣ್ಣಸಂಖದಲ್ಲಿ ಅವರ ಶವ ಪತ್ತೆ ಆಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆ ಆಗಿಲ್ಲ.

ಸೌಜನ್ಯ ಅವರ ಜೀವನ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.