ಬೆಂಗಳೂರು : ರಾಜ್ಯದಲ್ಲಿ ಲವ್ ಜಿಹಾದ್ ( Love jihad) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ( karnataka Govt) ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಮತಾಂತರ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ಡಿಸೆಂಬರ್ 19ರಿಂದ ಬೆಳಗಾವಿಯ ಸುವರ್ಣ ವಿಕಾಸಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಮಂಡಿಸಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ. ಇನ್ನೂ, ಲವ್ ಜಿಹಾದ್ ನಿಷೇಧ ಕಾಯಿದೆಯನ್ನು ಜಾರಿ ತರಲು ಸರ್ಕಾರ ಎಲ್ಲಾ ರೀತಿಯ ಸಿದ್ದತಾ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಈಗಾಗಲೇ ಗೃಹ ಇಲಾಖೆ ಮತ್ತು ಕಾನೂನು ಇಲಾಖೆ ಜಂಟಿ ಸಹಭಾಗಿತ್ವದಲ್ಲಿ ಈ ಕಾಯ್ದೆಗೆ ಅಂತಿಮ ರೂಪುರೇಷೆಗಳು ಸಿದ್ದವಾಗಿದ್ದು, ಅಧಿವೇಶನದಲ್ಲಿ ಮಂಡನೆಯಾಗುವುದು ಖಚಿತ ಎನ್ನಲಾಗಿದೆ.ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಪಕ್ಷದ ಪ್ರಮುಖರು ಸೂಚನೆ ನೀಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ಧಾ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಶ್ರದ್ದಾಳನ್ನು ಆಕೆಯ ಪ್ರಿಯಕರ ತುಂಡು ತುಂಡು ಮಾಡಿ ಫ್ರಿಡ್ಜ್ ನಲ್ಲಿಟ್ಟ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ತಿಳಿದು ಬಂದಿದೆ. ಲವ್ ಜಿಹಾದ್ ಅಥವಾ ರೋಮಿಯೋ ಜಿಹಾದ್ ಎಂಬುದು ಮುಸ್ಲಿಂ ಪುರುಷರು ಧಾರ್ಮಿಕ ಮತಾಂತರದ ಒಂದು ಕಾರ್ಯವಿಧಾನವಾಗಿದ್ದು, ಮುಸ್ಲಿಂ ಅಲ್ಲದ ಸಮುದಾಯಗಳಿಗೆ ಸೇರಿದ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಪ್ರೀತಿಯನ್ನು ತೋರಿಸುವ ಮೂಲಕ ಇಸ್ಲಾಂಗೆ ಮತಾಂತರಗೊಳ್ಳುತ್ತಾರೆ.